ಮುಂಬೈ: ನಟಿ ಆಲಿಯಾ ಭಟ್ ಪ್ರಧಾನ ಪಾತ್ರದಲ್ಲಿ ನಟಿಸಿರುವ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ 'ಗಂಗೂಬಾಯಿ ಕಾಠಿಯಾವಾಡಿ' ಚಿತ್ರವು ಫೆಬ್ರುವರಿ 25ರಂದು ತೆರೆಗೆ ಬರಲಿದೆ.

ಈಗಾಗಲೇ ಗಂಗೂಬಾಯಿ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ರಸಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಮುಂಬೈನ ಕಾಮಾಟಿಪುರದ ವೇಶ್ಯೆಯರು ಹಾಗೂ ಅವರ ಮಕ್ಕಳ ಹಕ್ಕುಗಳಿಗಾಗಿ ಹೋರಾಡುವ ಗಂಗೂಬಾಯಿಯ ಜೀವನವನ್ನು ಆಧರಿಸಿ ಚಿತ್ರವನ್ನು ತಯಾರಿಸಲಾಗಿದೆ.

ಈ ಚಿತ್ರದಲ್ಲಿ ಸೀಮಾ ಫಹ್ವಾ ಅವರು ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಅತಿಥಿ ಪಾತ್ರದಲ್ಲಿ ನಟ ಅಜಯ್ ದೇವಗನ್ ಮತ್ತು ಹುಮಾ ಖುರೇಷಿ ಕಾಣಿಸಿಕೊಂಡಿದ್ದಾರೆ.

ಚಿತ್ರದಲ್ಲಿ ಒಟ್ಟು ಆರು ಹಾಡುಗಳಿದ್ದು, ಇದರ ಆಲ್ಬಮ್ ಶುಕ್ರವಾರ ಬಿಡುಗಡೆಯಾಗಿದೆ. ಅರ್ಜಿತ್ ಸಿಂಗ್, ಶ್ರೇಯಾ ಘೋಷಾಲ್ ಸೇರಿದಂತೆ ಬಾಲಿವುಡ್ನ ಹಲವು ಪ್ರಮುಖ ಗಾಯಕರು ಈ ಹಾಡುಗಳಿಗೆ ಧ್ವನಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.