ಶ್ರೀನಗರ ಕಿಟ್ಟಿ, ರಚಿತಾ ರಾಮ್ ಜೋಡಿಯಾಗಿ ನಟಿಸಿರುವ ‘ ಸಂಜು ವೆಡ್ಸ್ ಗೀತಾ-2’ ಚಿತ್ರದ ‘ಅವನು ಸಂಜು ಅವಳು ಗೀತಾ ಅವರಿಬ್ಬರು ಸೇರಲು ಸಂಗೀತ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ನಟ ಉಪೇಂದ್ರ ಹಾಡು ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.

‘ನನಗೆ ಮೊದಲು ಈ ಚಿತ್ರದ ಕ್ಲೈಮ್ಯಾಕ್ಸ್ ಏನಂದು ಗೊತ್ತಾಯ್ತು. ಅದನ್ನು ಕೇಳಿದಾಗಲೇ ಈ ಸಿನಿಮಾ ಸೂಪರ್ ಸಕ್ಸಸ್ ಆಗುತ್ತದೆ ಎಂದಿದೆ. ಈ ಹಾಡನ್ನು ನೋಡಿದಾಗ ನನ್ನ ನಂಬಿಕೆ ಇನ್ನಷ್ಟು ಗಟ್ಟಿಯಾಗಿದೆ’ ಎಂದರು ಉಪೇಂದ್ರ.

ಪವಿತ್ರ ಇಂಟರ್ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ನಿರ್ಮಿಸಿರುವ ಚಿತ್ರಕ್ಕೆ ನಾಗಶೇಖರ್ ನಿರ್ದೇಶನವಿದೆ. ಈ ಗೀತೆಗೆ ಕವಿರಾಜ್ ಸಾಹಿತ್ಯವಿದ್ದು, ಶ್ರೀಧರ್ ವಿ.ಸಂಭ್ರಮ್ ಸಂಗೀತ ನೀಡಿದ್ದಾರೆ.

‘ನಾನು ಈ ಸಿನಿಮಾ ಮಾಡಬೇಕೆಂದು ನಿರ್ಧರಿಸಿದಾಗ ಮೊದಲು ಹಾಡುಗಳನ್ನು ರೆಡಿ ಮಾಡಿಕೊಂಡೆ. ಒಟ್ಟು ಆರು ಹಾಡುಗಳು ಚಿತ್ರದಲ್ಲಿದ್ದು, ಈ ಹಾಡಿನಲ್ಲಿ ಒಬ್ಬ ಸೈನಿಕನ ಪ್ರೇಮಕಥೆಯನ್ನು ಹೇಳಿದ್ದೇನೆ. ಸ್ವಿಟ್ಜರ್ಲೆಂಡ್ ಸೈನಿಕನೊಬ್ಬ ತನ್ನ ರಾಣಿಯನ್ನು ಹೃದಯದಿಂದ ಪ್ರೀತಿ ಮಾಡಿರುತ್ತಾನೆ. ಆತನಿಗೆ ತನ್ನ ಪ್ರೀತಿಯನ್ನು ಹೇಳಿಕೊಳ್ಳಲು ಸಾಧ್ಯವಾಗಿರುವುದಿಲ್ಲ ಎಂಬ ಸನ್ನಿವೇಶದ ಹಾಡಿದು’ ಎಂದರು ನಾಗಶೇಖರ್.

ಸತ್ಯ ಹೆಗಡೆ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ. ನಟ ಚೇತನ್ ಚಂದ್ರ, ರಾಗಿಣಿ ದ್ವಿವೇದಿ ವಿಶೇಷ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು, ಸಾಧು ಕೋಕಿಲ, ತಬಲಾ ನಾಣಿ, ಗಿಚ್ಚಿಗಿಲಿಗಿಲಿ ವಿನೋದ್, ಖಳನಟ ಸಂಪತ್ಕುಮಾರ್ ಸೇರಿದಂತೆ ಸಾಕಷ್ಟು ಕಲಾವಿದರು ತಾರಾಗಣದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.