ಬಹುತೇಕ ಹೊಸಬರಿಂದಲೇ ಕೂಡಿರುವ ‘ಸಂತೋಷ ಸಂಗೀತ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ‘ಯು’ ಪ್ರಮಾಣ ಪತ್ರ ಪಡೆದಿರುವ ಚಿತ್ರ ಶೀಘ್ರದಲ್ಲಿ ತೆರೆಗೆ ಬರಲಿದೆ.

ಸಿದ್ದು ಎಸ್ ನಿರ್ಮಿಸಿ, ನಿರ್ದೇಶಿಸಿರುವ ಚಿತ್ರದಲ್ಲಿ ಅರ್ನವ್ ವಿನ್ಯಾಸ್ಗೆ ರಾಣಿ ವರದ್ ನಾಯಕಿಯಾಗಿದ್ದಾರೆ. ‘ನಾನು ಎಂ.ಸಿ.ಎ ಪದವೀಧರ. ಸಿನಿಮಾ ಪ್ರೇಮಿ. ಒಳ್ಳೆಯ ಸಿನಿಮಾ ನೋಡಿ, ನಾನು ಈ ರೀತಿ ಸಿನಿಮಾ ಮಾಡಬೇಕೆಂದು ಕನಸು ಕಂಡವನು. ಆ ಕನಸು ಈಗ ನನಸಾಗಿದೆ. ಲಾಕ್ಡೌನ್ ಸಮಯದಲ್ಲಿ ಬರೆದ ಕಥೆ ಇದು. ಲವ್, ಕಾಮಿಡಿ, ಸಸ್ಪೆನ್ಸ್ ಹೀಗೆ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ’ ಎಂದರು ನಿರ್ದೆಶಕರು.

ದೊಡ್ಡಣ್ಣ, ಅವಿನಾಶ್, ಲಯ ಕೋಕಿಲ, ಕವನ, ಅಮಿತ್, ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಲೋಕೇಶ್ ಸೂರ್ಯ, ಮಡೆನೂರು ಮನು ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.