ರಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿ, ನಿರ್ಮಾಣ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಚಿತ್ರ ಎರಡು ಭಾಗಗಳಲ್ಲಿ ತೆರೆಕಾಣುತ್ತಿದ್ದು, ಸೈಡ್ 1 ಸೆಪ್ಟೆಂಬರ್ 1ರಂದು ಬಿಡುಗಡೆಯಾದರೆ, ಸೈಡ್ 2 ಅಕ್ಟೋಬರ್ 20ಕ್ಕೆ ತೆರೆಗೆ ಬರಲಿದೆ.

ಹೇಮಂತ್ ಎಂ. ರಾವ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ‘ಗೋಧಿ ಬಣ್ಣ...’ದ ಬಳಿಕ ರಕ್ಷಿತ್ ಶೆಟ್ಟಿ ಹಾಗೂ ಹೇಮಂತ್ ಕಾಂಬಿನೇಶನ್ನಲ್ಲಿ ಬರುತ್ತಿರುವ ಈ ಚಿತ್ರದ ಮೇಲೆ ಪ್ರೇಕ್ಷಕರಿಗೆ ನಿರೀಕ್ಷೆ ಹೆಚ್ಚಿದೆ. ಸದ್ಯ ಈ ಚಿತ್ರಕ್ಕಾಗಿ ಎಂ.ಸಿ.ಬಿಜ್ಜು ಹಾಗೂ ಕಿರಣ್ ಕಾವೇರಪ್ಪ ಬರೆದಿರುವ ‘ಹೋರಾಟ’ ಎಂಬ ಹಾಡಿನ ಲಿರಿಕಲ್ ವಿಡಿಯೋ ಪರಂವಃ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಎಂ.ಸಿ.ಬಿಜ್ಜು(ರ್ಯಾಪರ್) ಹಾಗೂ ಕೀರ್ತನ್ ಹೊಳ್ಳ ಹಾಡಿರುವ ಈ ಹಾಡು ಕೇಳುಗರನ್ನು ಸೆಳೆಯುತ್ತಿದೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ ನೀಡಿದ್ದಾರೆ.

ಅದ್ವೈತ ಗುರುಮೂರ್ತಿ ಛಾಯಾಚಿತ್ರಗ್ರಹಣ ಹಾಗೂ ಸುನೀಲ್ ಭಾರದ್ವಾಜ್ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಚೈತ್ರ ಜೆ. ಆಚಾರ್, ಅವಿನಾಶ್, ಶರತ್ ಲೋಹಿತಾಶ್ವ, ಅಚ್ಯುತ್ಕುಮಾರ್, ಪವಿತ್ರ ಲೋಕೇಶ್, ರಮೇಶ್ ಇಂದಿರಾ, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.