ಮುಂಬೈ: 2007ರಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹಾಲಿವುಡ್ ನಟ ರಿಚರ್ಡ್ ಗೇರ್ ಅವರು ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಅವರಿಗೆ ಮುತ್ತಿಟ್ಟ ಪ್ರಕರಣದಲ್ಲಿ ಶಿಲ್ಪಾ ಅವರನ್ನು ಬಿಡುಗಡೆಗೊಳಿಸಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಮುಂಬೈನ ಸೆಷನ್ಸ್ ನ್ಯಾಯಾಲಯವು ಸೋಮವಾರ ವಜಾಗೊಳಿಸಿದೆ.

ಸೆಷನ್ಸ್ ನ್ಯಾಯಾಲಯದ ಎಸ್.ಸಿ. ಜಾಧವ್ ಅವರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದ ವಿರುದ್ಧದ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಇದುವರೆಗೆ ಆದೇಶದ ವಿವರವಾದ ಪ್ರತಿ ಲಭ್ಯವಾಗಿಲ್ಲ.

2007ರಲ್ಲಿ ರಾಜಸ್ಥಾನದಲ್ಲಿ ನಡೆದ ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಮುತ್ತಿನ ಪ್ರಕರಣವು ನಡೆದಿತ್ತು. ಈ ಪ್ರಕರಣವನ್ನು ಅಶ್ಲೀಲ ಹಾಗೂ ದೇಶದ ಸಂಸ್ಕೃತಿಗೆ ಅಗೌರವ ತರುವಂಥದ್ದು ಎಂದು ವಿಶ್ಲೇಷಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜಸ್ಥಾನದಲ್ಲಿ ರಿಚರ್ಡ್ ಮತ್ತು ಶಿಲ್ಪಾ ಅವರ ವಿರುದ್ಧ ದೂರು ದಾಖಲಾಗಿತ್ತು.

ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ಈ ಪ್ರಕರಣವು ಮುಂಬೈ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿತ್ತು. ಶಿಲ್ಪಾಶೆಟ್ಟಿ ಅವರು ಈ ಪ್ರಕರಣದಲ್ಲಿ ಬಲಿಪಶು ಎಂಬುದಾಗಿ ಹೇಳಿದ್ದ ನ್ಯಾಯಾಲಯವು ಅವರನ್ನು ಬಿಡುಗಡೆ ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.