ಖ್ಯಾತ ನಟಿ ಶಾನ್ವಿ ಶ್ರೀವಾಸ್ತವ್ ಬ್ಯಾಂಗ್ ಚಿತ್ರದ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಭಿನ್ನ ಪಾತ್ರಗಳ ಮೂಲಕ ತೆರೆ ಮೇಲೆ ಮಿಂಚಿದ್ದ ಶಾನ್ವಿ ಈ ಚಿತ್ರದಲ್ಲಿ ಗ್ಯಾಂಗ್‌ಸ್ಟರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಯು.ಕೆ.ಪ್ರೊಡಕ್ಷನ್ಸ್ ಲಾಂಛನದಲ್ಲಿ ಪೂಜಾ ವಸಂತಕುಮಾರ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ಆನ ಹಾಗೂ ನಾನು, ಅದು ಮತ್ತು ಸರೋಜ ಚಿತ್ರಗಳನ್ನು ನಿರ್ಮಾಣ ಮಾಡಿರುವ ಪೂಜಾ ವಸಂತಕುಮಾರ್ ಅವರ ನಿರ್ಮಾಣದ ಮೂರನೇ ಚಿತ್ರ ‘ಬ್ಯಾಂಗ್’.

ಕೆಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿದ್ದ ಹಾಗೂ ಹಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಗಣೇಶ್ ಪರಶುರಾಮ್ ಈ ಚಿತ್ರದ ನಿರ್ದೇಶಕರು.

ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ರಿತ್ವಿಕ್ ಮುರಳಿಧರ್ ಸಂಗೀತ ನೀಡುತ್ತಿದ್ದಾರೆ. ಉದಯಲೀಲ ಛಾಯಾಗ್ರಹಣ ಹಾಗೂ ವಿಜೇತ್ ಚಂದ್ರ ಸಂಕಲನ ಈ ಚಿತ್ರಕ್ಕಿದೆ. ಸೌಂಡ್ ಡಿಸೈನ್ ನವೀನ್ ಕುಮಾರ್ ಅವರದು.

ಬ್ಯಾಂಗ್ ಕೇವಲ ಏಳು - ಎಂಟು ಪಾತ್ರಗಳ ನಡುವೆ ಎರಡು ದಿನಗಳಲ್ಲಿ ನಡೆಯುವ ಕಥೆಯಾಗಿದೆ.

ಶಾನ್ವಿ ಶ್ರೀವಾಸ್ತವ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಉಳಿದ ಪಾತ್ರಗಳಲ್ಲಿ ಅಭಿಯಿಸಿರುವ ಕಲಾವಿದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಈಗಾಗಲೇ ಬೆಂಗಳೂರಿನಲ್ಲಿ ಎರಡು ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಮೂರನೇ ಹಂತದ ಚಿತ್ರೀಕರಣ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.