ವರನಟ ಡಾ. ರಾಜ್‌ಕುಮಾರ್ ಮೊಮ್ಮಗ, ಪೂರ್ಣಿಮಾ-ರಾಮ್‌ಕುಮಾರ್ ಪುತ್ರ ಧೀರೇನ್ ರಾಮ್‌ಕುಮಾರ್ ಮೊದಲ ಬಾರಿಗೆ ನಾಯಕರಾಗಿ ನಟಿಸುತ್ತಿರುವ 'ಶಿವ 143' ಸಿನಿಮಾ ವಿಡಿಯೊ ಸಾಂಗ್ ಬಿಡುಗಡೆಯಾಗಿದೆ.

ಧೀರೇನ್ ರಾಮ್‌ಕುಮಾರ್‌ಗೆ ನಟಿ ಮಾನ್ವಿತಾ ಕಾಮತ್ ನಾಯಕಿಯಾಗಿದ್ದಾರೆ. ಪ್ರೇಮಿಗಳ ದಿನವಾದ ಇಂದು (ಫೆ.14) ’ಶಿವ 143' ಚಿತ್ರದ 'ಮಳೆ ಹನಿಯೇ...’ ವಿಡಿಯೊ ಸಾಂಗ್ ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದ್ದು ಸಿನಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ರೋಮ್ಯಾಂಟಿಕ್ ಆಗಿರುವ 'ಮಳೆ ಹನಿಯೇ’ ಹಾಡಿನಲ್ಲಿ ಧೀರೇನ್ ಮತ್ತು ಮಾನ್ವಿತಾ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ಇರುವ ಈ ಹಾಡಿಗೆ ಕ್ರಾಂತಿ ಕುಮಾರ್ ಸಾಹಿತ್ಯ ಬರೆದಿದ್ದಾರೆ. ಈ ಹಾಡನ್ನು ನಿಹಾಲ್ ಮತ್ತು ಪೃಥ್ವಿ ಭಟ್ ಹಾಡಿದ್ದಾರೆ.

ಜಯಣ್ಣ, ಭೋಗೇಂದ್ರ ಮತ್ತು ಡಾ. ಸೂರಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದು ಅನಿಲ್ ಕುಮಾರ್ ನಿರ್ದೇಶನ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.