ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆ್ಯಕ್ಷನ್ ಕಟ್ ಹೇಳುತ್ತಿರುವ ಶಿವರಾಜ್‌ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ.ಶೆಟ್ಟಿ ಜೊತೆಯಾಗಿ ಕಾಣಿಸಿಕೊಳ್ಳಲಿರುವ ‘45’ ಸಿನಿಮಾದ ಚಿತ್ರೀಕರಣ ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿ ಪುನರಾರಂಭವಾಗಿದೆ.

2023ರ ಏಪ್ರಿಲ್‌ನಲ್ಲಿ ಸೆಟ್ಟೇರಿದ್ದ ಈ ಸಿನಿಮಾದ ಕ್ಲೈಮ್ಯಾಕ್ಸ್ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದ್ದು ಮೂವರೂ ನಾಯಕರು ಭಾಗವಹಿಸಿದ್ದಾರೆ. ಅದ್ಧೂರಿಯಾಗಿ ಕ್ಲೈಮ್ಯಾಕ್ಸ್ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದೆ. ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಈ ಸಿನಿಮಾ ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳದಲ್ಲಿ ತೆರೆಕಾಣಲಿದೆ. ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಚಿತ್ರ ಇದಾಗಿದ್ದು, ಅವರೇ ಕಥೆ-ಚಿತ್ರಕಥೆ ಬರೆದು ಸಂಗೀತ ಸಂಯೋಜಿಸಿದ್ದಾರೆ. ಸತ್ಯ ಹೆಗಡೆ ಛಾಯಾಚಿತ್ರಗ್ರಹಣ, ರವಿ ವರ್ಮ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ‘ಒಂದು ದೊಡ್ಡ ಫಿಲಾಸಫಿಯನ್ನು ಸರಳ ರೀತಿಯಲ್ಲಿ, ಕ್ಲಾಸ್ ಮತ್ತು ಮಾಸ್ ಆಗಿ ಹೇಳುವ ಪ್ರಯತ್ನವಿದು’ ಎನ್ನುತ್ತಾರೆ ಅರ್ಜುನ್ ಜನ್ಯ.

ಈಗಾಗಲೇ ಶಿವರಾಜ್‌ಕುಮಾರ್ ಹಾಗೂ ಉಪೇಂದ್ರ ಅವರ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು, ಚಿತ್ರದ ನಿರೀಕ್ಷೆ ಹೆಚ್ಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.