ಯೋಗರಾಜ್ ಭಟ್ ಆ್ಯಕ್ಷನ್ ಕಟ್ ಹೇಳಿರುವ ‘ಕರಟಕ ದಮನಕ’ ಬಿಡುಗಡೆಗೆ ಸಜ್ಜಾಗುತ್ತಿದ್ದು, ಚಿತ್ರದ ಎರಡನೇ ಹಾಡು ‘ಡೀಗ ಡಿಗರಿ’ ಅಬುದಾಬಿಯಲ್ಲಿ ಇತ್ತೀಚೆಗೆ ಬಿಡುಗಡೆಯಾಯಿತು.

ಚಿತ್ರದ ನಾಯಕರಾದ ಶಿವರಾಜ್ಕುಮಾರ್ ಹಾಗೂ ಪ್ರಭುದೇವ ಹಾಡಿಗೆ ವೇದಿಕೆಯಲ್ಲಿ ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು. ಸಿನಿಮಾ ಶಿವರಾತ್ರಿಗೆ (ಮಾರ್ಚ್ 8) ರಿಲೀಸ್ ಆಗಲಿದೆ. ‘ಡೀಗ ಡಿಗರಿ’ ಹಾಡನ್ನು ಯೋಗರಾಜ್ ಭಟ್ ಅವರು ಬರೆದಿದ್ದು, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜೇಶ್ ಕೃಷ್ಣನ್ ಹಾಡಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಅಬುದಾಬಿಯಲ್ಲಿ ನೆಲೆಸಿರುವ ಸಹಸ್ರಾರು ಕನ್ನಡಿಗರ ಸಮ್ಮುಖದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಶಿವರಾಜಕುಮಾರ್, ಪ್ರಭುದೇವ, ಯೋಗರಾಜ್ ಭಟ್, ಚಿತ್ರದ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಹಾಗೂ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಭಾಗವಹಿಸಿದ್ದರು.

‘ಕರಟಕ ದಮನಕ’ ಎಂದರೆ ಎರಡು ಕುತಂತ್ರಿ ನರಿಗಳ ಹೆಸರು. ಸಾಮಾನ್ಯವಾಗಿ ಯಾವಾಗಲೂ ಒಟ್ಟಿಗೆ ಇರುವ ಇಬ್ಬರನ್ನು ಹೆಚ್ಚು ಸಲ ನೋಡಿದಾಗ ‘ಕರಟಕ ದಮನಕ’ ಎನ್ನುತ್ತಾರೆ. ಇದು ಉತ್ತರ ಕರ್ನಾಟಕದಲ್ಲಿ ನಡೆಯುವ ಕಥೆ. ಈ ಚಿತ್ರ ನೋಡಿದ ಪ್ರತಿಯೊಬ್ಬ ವ್ಯಕ್ತಿಗೂ ಅವನ ಊರು, ಆ ಊರಿನಲ್ಲಿ ಎಳೆದ ತೇರು ಹಾಗೂ ಅವನು ಯಾವ ನೀರು ಕುಡಿದು ಬೆಳೆದಿದ್ದಾನೋ ಆ ನೀರು ನೆನಪಾಗುತ್ತದೆ’ ಎಂದರು ಯೋಗರಾಜ್ ಭಟ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.