ಬೆಂಗಳೂರು:ದಕ್ಷಿಣ ಭಾರತದ ಅಂತರರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ (ಸೈಮಾ) ಪ್ರದಾನ ಸಮಾರಂಭ ಇತ್ತೀಚೆಗೆ ನಡೆದಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ.

ಶನಿವಾರ (ಸೆ.11)ದಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ನಡೆದಿತ್ತು.ಈ ವರ್ಣರಂಜಿತ ಕಾರ್ಯಕ್ರಮದಲ್ಲಿ ಕನ್ನಡ, ತಮಿಳು, ತೆಲುಗು, ಮಲಯಾಳಂ ನಟ, ನಟಿಯರು ಭಾಗವಹಿಸಿದ್ದರು.

ಓದಿ: ಹಾಸ್ಯ ನಟರಾಜು ಶ್ರೀವಾಸ್ತವ ನಿಧನ: ಅಭಿಮಾನಿಗಳ ಕಂಬನಿ

ಈ ಕಾರ್ಯಕ್ರಮದ ಬಳಿಕ ಖಾಸಗಿ ಹೊಟೇಲ್‌ನಲ್ಲಿ ನಟ, ನಟಿಯರು ರಾತ್ರಿ 3.30ರವರೆಗೂಪಾರ್ಟಿ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಈ ಸಂಬಂಧ ದೂರು ದಾಖಲಾಗಿದೆ.

ಸೈಮಾ ಪಾರ್ಟಿಯಲ್ಲಿ ‘ರಾಕಿಂಗ್ ಸ್ಟಾರ್’ ಯಶ್ (Yash), ಅಭಿಷೇಕ್ ಅಂಬರೀಷ್ (Abhishek Ambareesh) ಭಾಗಿಯಾಗಿದ್ದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.ಸಮಯನಿಯಮ ಮೀರಿ ಪಾರ್ಟಿ ಮಾಡಿದ್ದಾರೆ ಎಂಬ ಆರೋಪಕೇಳಿ ಬಂದಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದ್ದು, ಸಾಮಾನ್ಯರಿಗೆ ಒಂದು ಕಾನೂನು, ಸೆಲೆಬ್ರಿಟಿಗಳಿಗೆ ಒಂದು ಕಾನೂನೇ ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ.

ಓದಿ: 'ಸೈಮಾ‘ ಅವಾರ್ಡ್ ಪಾರ್ಟಿ:ನಿಯಮ ಉಲ್ಲಂಘನೆ;ಆಯೋಜಕರು, ಹೋಟೆಲ್ವಿರುದ್ಧ ಎಫ್ಐಆರ್

ಅಲ್ಲು ಅರ್ಜುನ್ ಅಭಿನಯದ, ಸುಕುಮಾರ್ ನಿರ್ದೇಶನದ ‘ಪುಷ್ಪ ದಿ ರೈಸ್’(ತೆಲುಗು) ಅತ್ಯುತ್ತಮ ಚಿತ್ರ ಪ್ರಶಸ್ತಿ ಬಾಚಿಕೊಂಡಿದೆ. ಇದೇ ಚಿತ್ರದ ಅಭಿನಯಕ್ಕಾಗಿ ನಟ ಅಲ್ಲು ಅರ್ಜುನ್ ಅವರು ಅತ್ಯುತ್ತಮ ನಟ, ನಿರ್ದೇಶಕ ಸುಕುಮಾರ್ ಅವರು ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ನಟ ದಿವಂಗತ ಪುನೀತ್ ರಾಜ್‌ಕುಮಾರ್ ಅವರಿಗೆ ಯುವರತ್ನ ಚಿತ್ರಕ್ಕಾಗಿ ಮರಣೋತ್ತರವಾಗಿ ಉತ್ತಮ ನಾಯಕ ನಟ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಓದಿ: ಸೈಮಾ ಪ್ರಶಸ್ತಿ; ಕನ್ನಡದಲ್ಲಿ ಯಾರಿಗೆ? ಇಲ್ಲಿದೆ ಪಟ್ಟಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.