‘ಸಿಂಹರೂಪಿಣಿ’ ಚಿತ್ರದ ಪಾತ್ರಗಳನ್ನು ಪರಿಚಯಿಸುವ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಕಿನ್ನಾಳ್ರಾಜ್ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸಂಗೀತ ನಿರ್ದೇಶಕ ರವಿ ಬಸ್ರೂರು ಹಾಗೂ ನಿರ್ದೇಶಕ ಜಡೇಶ್ ಹಂಪಿ ಚಿತ್ರದ ಟೀಸರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.

‘ಚಿತ್ರದ ಶೀರ್ಷಿಕೆ ಹೇಳುವಂತೆ ಶ್ರೀ ಮಾರಮ್ಮ ದೇವಿ ಕುರಿತಾದ ಚಿತ್ರವಿದು. ಸಾಕಷ್ಟು ಗ್ರಾಫಿಕ್ಸ್ ಇದೆ. ಸಪ್ತಮಾತ್ರಿಕೆಯರ ವಿಷಯಗಳನ್ನು ಹೊಂದಿದ್ದು, ರಾಕ್ಷಸನನ್ನು ಸಂಹಾರ ಮಾಡಲು ಪಾರ್ವತಿದೇವಿ ಏಳು ಅವತಾರಗಳಲ್ಲಿ ಭೂಮಿಗೆ ಬರುತ್ತಾಳೆ. ಅದರಲ್ಲಿ ಕೊನೆಯದು ಶ್ರೀ ಮಾರಮ್ಮ ದೇವಿಯದು ಆಗಿರುತ್ತದೆ. ತಾಯಿಯ ಮಹಿಮೆ, ಪವಾಡಗಳನ್ನು ಈಗಿನ ಟ್ರೆಂಡ್ಗೆ ತಕ್ಕಂತೆ ಕಮರ್ಷಿಯಲ್ ಅಂಶಗಳನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ’ ಎಂದರು ನಿರ್ದೆಶಕರು.

ದೊಡ್ಡಬಳ್ಳಾಪುರ ಕೆ.ಎಂ.ನಂಜುಂಡೇಶ್ವರ ಕಥೆ ಬರೆದು ಶ್ರೀ ಚಕ್ರ ಫಿಲ್ಮ್ಸ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಆಕಾಶ್ ಪರ್ವ ಸಂಗೀತ, ಕಿರಣ್ಕುಮಾರ್ ಛಾಯಾಚಿತ್ರಗ್ರಹಣ, ವೆಂಕಿ ಯುಡಿವಿ ಸಂಕಲನವಿದೆ.

ಅಂಕಿತಾ ಗೌಡ, ಯಶಸ್ವಿನಿ ಚಿತ್ರದ ನಾಯಕಿಯರು. ಖುಷಿ ಬಸ್ರೂರು ಬಾಲ ದೇವಿಯಾಗಿ ಕಾಣಿಸಿಕೊಂಡಿದ್ದಾರೆ. ತಬಲ ನಾಣಿ, ವಿಜಯ್ ಚೆಂಡೂರು, ಹರೀಶ್ ರಾಯ್, ಯಶ್ ಶೆಟ್ಟಿ, ದಿನೇಶ್ ಮಂಗಳೂರು ಮುಂತಾದವರು ಪ್ರಮುಖ ಪಾತ್ರದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.