ಬೆಂಗಳೂರು: ರೂಪದರ್ಶಿ, ನಟಿ ಪವಿತ್ರಾ ಗೌಡ ಅವರು ನಟ ದರ್ಶನ್ ಅವರೊಂದಿಗಿನ ಸಂಬಂಧಕ್ಕೆ 10 ವರ್ಷ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು, ಪವಿತ್ರಾ ಗೌಡ ಅವರ ಹಲವು ಫೋಟೋಗಳನ್ನು ಹಂಚಿಕೊಂಡು ‘ಇದು ಇವರ ನೈಜ ಮುಖ’ ಎಂದು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಪವಿತ್ರಾ ಗೌಡ ತಮ್ಮ ಪೋಸ್ಟ್ನಲ್ಲಿ ದರ್ಶನ್ ಜೊತೆಗಿನ ಒಂದಷ್ಟು ಫೋಟೊಗಳನ್ನು ಹಂಚಿಕೊಂಡು One decade down; forever to go ಎಂದು ಬರೆದುಕೊಂಡಿದ್ದಾರೆ.

ಇದಕ್ಕೆ ಪ್ರತಿಯಾಗಿ ವಿಜಯಲಕ್ಷ್ಮಿ ಅವರು, ‘ಬೇರೊಬ್ಬರ ಗಂಡನ ಚಿತ್ರವನ್ನು ಪೋಸ್ಟ್ ಮಾಡುವ ಮೊದಲು ಈ ಮಹಿಳೆಗೆ ಪ್ರಜ್ಞೆ ಇರಬೇಕು ಎಂದು ನಾನು ಭಾವಿಸುತ್ತೇನೆ, ಅದು ಅವಳ ಪಾತ್ರ ಮತ್ತು ನೈತಿಕ ನಿಲುವಿನ ಬಗ್ಗೆ ಮಾತನಾಡುತ್ತದೆ, ಪುರುಷ ವಿವಾಹಿತನೆಂದು ತಿಳಿದೂ ಕೂಡ ಈಕೆ ತನ್ನ ವೈಯಕ್ತಿಕ ಅಗತ್ಯಗಳಿಗಾಗಿ ಹತ್ತಿರವಾಗಿದ್ದಾಳೆ’ ಎಂದಿದ್ದಾರೆ.

ಪವಿತ್ರಾ ಗೌಡ ಅವರ ಮಗಳು ಮತ್ತು ಗಂಡನ ಫೋಟೊ ಶೇರ್ ಮಾಡಿ, ‘ಈ ಚಿತ್ರಗಳು ಸ್ಪಷ್ಟವಾಗಿವೆ ಖುಶಿ ಗೌಡ, ಪವಿತ್ರಾ ಮತ್ತು ಸಂಜಯ್ ಸಿಂಗ್ ಅವರ ಮಗಳು .... ನಾನು ಸಾಮಾನ್ಯವಾಗಿ ವೈಯಕ್ತಿಕ ವಿಚಾರಗಳ ಬಗ್ಗೆ ಧ್ವನಿ ಎತ್ತಲು ಸಾಮಾಜಿಕ ಮಾಧ್ಯಮವನ್ನು ಆಯ್ಕೆ ಮಾಡಿಕೊಳ್ಳುವುದಿಲ್ಲ. ಆದರೆ ಈಗ ನನ್ನ ಕುಟುಂಬದ ಹಿತದೃಷ್ಟಿಯಿಂದ ಧ್ವನಿ ಎತ್ತುವ ಸಮಯ ಬಂದಿದೆ. ಇಡೀ ಸಮಾಜಕ್ಕೆ ಬೇರೆ ರೀತಿಯ ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಬರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.