ಕೊರೊನಾ ಸಮಯದಲ್ಲಿ ಇದ್ದಕ್ಕಿದ್ದಂತೆ ಲಾಕ್ಡೌನ್ ವಿಧಿಸಿದಾಗ ಉದ್ಯೋಗ, ಕೂಲಿ, ಓದು ಹೀಗೆ ಹಲವು ಕಾರಣಗಳಿಂದ ತಮ್ಮ ಹುಟ್ಟೂರಿನಿಂದ ದೂರ ಉಳಿದಿದ್ದ ಜನರಿಗೆ ಊರಿಗೆ ಹೋಗುವುದು ಕಷ್ಟಸಾಧ್ಯವಾಗಿತ್ತು. ಅಂತಹ ಸಮಯದಲ್ಲಿ ಅಂತಹವರ ಪಾಲಿಗೆ ನಿಜವಾದ ಹೀರೊನಂತೆ ಮುಂದೆ ಬಂದವರು ನಟ ಸೋನು ಸೂದ್. ಆರ್ಥಿಕವಾಗಿ ಹಿಂದುಳಿದವರಿಗೆ ಸುರಕ್ಷಿತವಾಗಿ ಊರುಗಳಿಗೆ ಮರಳಲು ಬಸ್ಸು, ವಿಮಾನದ ವ್ಯವಸ್ಥೆ ಮಾಡಿದ್ದರು ಸೋನು. ತಮ್ಮ ಸ್ವಂತ ಖರ್ಚಿನಲ್ಲಿ ವಾಹನ ವ್ಯವಸ್ಥೆ ಮಾಡಿದ್ದಲ್ಲದೇ ಆರ್ಥಿಕ ಸಹಾಯವನ್ನೂ ಮಾಡಿದ್ದರು.

ಸೋನು ಅವರ ಈ ಕಾರ್ಯಕ್ಕೆ ದೇಶವೇ ತಲೆದೂಗಿತ್ತು. ರಾಜಕಾರಣಿಗಳು, ಸಿನಿಮಾರಂಗದವರು ಸೇರಿದಂತೆ ಪ್ರಧಾನಿ ಮೋದಿ ಕೂಡ ಸೋನು ಮಾಡಿದ ಕೆಲಸಕ್ಕೆ ಶ್ಲಾಘನೆ ಮಾಡಿದ್ದರು.

ಈಗ ನಾರ್ವೆಯಲ್ಲಿ ನಡೆಯಲಿರುವ ಪ್ರತಿಷ್ಠಿತ ಸ್ಕ್ಯಾಂಡೀವಿಯನ್ ಬಾಲಿವುಡ್ ಫೆಸ್ಟಿವಲ್ನಲ್ಲಿ ನಿಜಜೀವನದ ಈ ಹೀರೊಗೆ ‘ಹ್ಯುಮ್ಯಾನಿಟೇರಿಯನ್ 2020’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇಂದು ವರ್ಚುವಲ್ ಆಗಿ ನಡೆಯಲಿದೆ.

ಈ ಹಿಂದೆ 47ವರ್ಷದ ಈ ನಟ 2020ರ ಏಷ್ಯಿಯನ್ ಸೆಲೆಬ್ರೆಟಿಗಳ ಪಟ್ಟಿಯಲ್ಲಿ ಹೆಸರು ಗಿಟ್ಟಿಸಿಕೊಂಡಿದ್ದರು. ಪ್ರಪಂಚದಾದ್ಯಂತದ ವಲಸಿಗರು ಮತ್ತು ವಿದ್ಯಾರ್ಥಿಗಳಿಗೆ ಮಾಡಿದ ನಿಸ್ವಾರ್ಥ ಸಹಾಯಕ್ಕಾಗಿ ಅವರಿಗೆ ಪ್ರತಿಷ್ಠಿತ ಎಸ್ಡಿಜಿ ವಿಶೇಷ ಮಾನವೀಯ ಕ್ರಿಯೆಯ ಪ್ರಶಸ್ತಿಯನ್ನೂ ನೀಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.