ಹೈದರಾಬಾದ್: ನಟ ಪವನ್ ಕಲ್ಯಾಣ್ ಅವರ ಬಹುನಿರೀಕ್ಷಿತ ‘ಭಿಮ್ಲಾ ನಾಯಕ್' ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ.

ಪವನ್ ಅಭಿಮಾನಿಗಳು ಭಿಮ್ಲಾ ನಾಯಕ್' ಟ್ರೈಲರ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯುಟ್ಯೂಬ್‌ನಲ್ಲಿ ಗುರುರಾತ್ರಿ 9 ಗಂಟೆ ಟ್ರೈಲರ್ ಬಿಡುಗಡೆ ಮಾಡಲಾಯಿತು. ಬಿಡುಗಡೆಯಾಗಿ 15 ಗಂಟೆಗಳಲ್ಲಿ 93 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ.

ಸದ್ಯ ಈ ಟ್ರೈಲರ್ ಯುಟ್ಯೂಬ್‌ನಲ್ಲಿ ಟಾಪ್ ಟ್ರೆಂಡಿಂಗ್‌ನಲ್ಲಿದೆ. 10 ಲಕ್ಷಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದು ಸಾವಿರಾರು ಜನರು ಟ್ರೈಲರ್‌ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾಮೆಂಟ್ ಮಾಡುತ್ತಿದ್ದಾರೆ.

ಈ ಮೊದಲು ಸಿನಿಮಾವನ್ನು ಏಪ್ರಿಲ್ ತಿಂಗಳ ಬಳಿಕ ಬಿಡುಗಡೆ ಮಾಡಲಾಗುವುದು ಎಂದು ಚಿತ್ರತಂಡ ಹೇಳಿಕೆ ನೀಡಿತ್ತು. ಇದೀಗ ಫೆಬ್ರುವರಿ 25ಕ್ಕೆ ತೆರೆಗೆ ಬರಲಿದೆ ಎಂದು ಚಿತ್ರತಂಡ ಖಚಿತಪಡಿಸಿದೆ.

ಮಲಯಾಳಂನ ಸೂಪರ್ ಹಿಟ್ ‘ಅಯ್ಯಪ್ಪನ್ ಕೋಶಿಯಂ‘ ಸಿನಿಮಾದ ರಿಮೇಕ್ ಆಗಿರುವ 'ಭಿಮ್ಲಾ ನಾಯಕ್' ಸಿನಿಮಾವನ್ನು ಸಾಗರ್ ಕೆ ಚಂದ್ರ ಅವರು ನಿರ್ದೇಶಿಸಿದ್ದಾರೆ.

ಇದನ್ನೂ ಓದಿ:ಪಾತ್ರ ಪೋಷಣೆಗೆ ಕಾಮಾಟಿಪುರದ ವೇಶ್ಯೆಯರನ್ನು ಭೇಟಿಯಾಗಿದ್ದ ಆಲಿಯಾ ಭಟ್

ಪವನ್ ಕಲ್ಯಾಣ್, ರಾಣಾ ದಗ್ಗುಭಾಟಿ, ನಿತ್ಯಾ ಮೆನನ್, ಸಂಯುಕ್ತಾ ಮೆನನ್ ಪ್ರಮುಖ ತಾರಾಗಣದಲ್ಲಿದ್ದಾರೆ. ಸಿತಾರಾ ಎಂಟರಟೈನ್‌ಮೆಂಟ್ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ ಮಾಡಿದೆ.

ಇದನ್ನೂ ಓದಿ:‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದಲ್ಲಿ ಆಲಿಯಾ ಭಟ್ ಧರಿಸಿರುವ ಸೀರೆ ಬೆಲೆ ಎಷ್ಟು?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.