ನಟಿ ರಮ್ಯಾ ನಿರ್ಮಿಸಿ, ರಾಜ್ ಬಿ. ಶೆಟ್ಟಿ ಹಾಗೂ ಸಿರಿ ರವಿಕುಮಾರ್ ಜೋಡಿಯಾಗಿ ನಟಿಸಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರ ನವೆಂಬರ್ 24ರಂದು ತೆರೆಗೆ ಬರಲಿದೆ. ರಾಜ್ ಬಿ. ಶೆಟ್ಟಿ ನಿರ್ದೇಶಿಸಿರುವ ಈ ಚಿತ್ರದ ಮೂಲಕ ರಮ್ಯಾ ಚಿತ್ರರಂಗಕ್ಕೆ ಮರಳಿದ್ದರು. ತಾವೇ ನಾಯಕಿಯಾಗಿ ನಟಿಸುವುದಾಗಿಯೂ ಹೇಳಿದ್ದರು. ಆದರೆ ಬದಲಾದ ಸನ್ನಿವೇಶದಲ್ಲಿ ರಮ್ಯಾ ಚಿತ್ರದಲ್ಲಿ ನಟಿಸದೆ, ತಮ್ಮ ‘ಆ್ಯಪಲ್ ಬಾಕ್ಸ್ ಸ್ಟುಡಿಯೊ’ ಮೂಲಕ ನಿರ್ಮಾಪಕರಾಗಿ ಉಳಿದರು.

ಸಿನಿಮಾ ಬಿಡುಗಡೆಗೆ ಮುಂದಾಗಿರುವ ಚಿತ್ರತಂಡ ರಾಜ್ ಬಿ. ಶೆಟ್ಟಿ ಹಾಗೂ ಸಿರಿ ರವಿಕುಮಾರ್ ಒಟ್ಟಾಗಿ ಇರುವ ಪೋಸ್ಟರ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಿನಿಮಾ ಸೆಟ್ಟೇರಿತ್ತು. ಊಟಿಯಲ್ಲಿ ಚಿತ್ರದ ಬಹುತೇಕ ಚಿತ್ರೀಕರಣ ನಡೆದಿತ್ತು.

ಲೈಟರ್ ಬುದ್ಧ ಫಿಲ್ಮ್ಸ್ ಸಹಯೋಗದಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಲಾಗಿದ್ದು, ಚಿತ್ರಕ್ಕೆ ರಾಜ್ ಬಿ. ಶೆಟ್ಟಿ ಅವರದ್ದೇ ಕಥೆ ಇದೆ. ರಾಜ್ ಅವರ ‘ಗರುಡ ಗಮನ ವೃಷಭ ವಾಹನ’ ಚಿತ್ರದ ತಾಂತ್ರಿಕ ತಂಡವೇ ಇಲ್ಲಿ ಕೆಲಸ ಮಾಡಿದೆ. ಮಿಥುನ್ ಮುಕುಂದನ್ ಅವರ ಸಂಗೀತ, ಪ್ರವೀಣ್ ಶ್ರೀಯಾನ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.