‘ನಟರಾಕ್ಷಸ’ ಧನಂಜಯ ತಮ್ಮದೇ ಡಾಲಿ ಪಿಕ್ಚರ್ಸ್ನಡಿ ನಿರ್ಮಿಸುತ್ತಿರುವ ಟಗರುಪಲ್ಯ ಸಿನಿಮಾ ಚಿತ್ರೀಕರಣ ಪೂರ್ಣಗೊಂಡಿದೆ.

ನಿರ್ದೇಶಕ ಯೋಗರಾಜ್ ಭಟ್ ಸೇರಿದಂತೆ ಹಲವು ಖ್ಯಾತ ನಿರ್ದೇಶಕರ ಜೊತೆ ನಿರ್ದೇಶನದ ವಿಭಾಗದಲ್ಲಿ ಕಾರ್ಯನಿರ್ವಹಿಸಿರುವ ಉಮೇಶ್ ಕೆ. ಕೃಪ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಕಳೆದ ನವೆಂಬರ್ನಲ್ಲಿ ಈ ಸಿನಿಮಾ ಸೆಟ್ಟೇರಿತ್ತು. ಮಂಡ್ಯ, ಮಳವಳ್ಳಿ, ಮುತ್ತತ್ತಿ ಹಾಗೂ ಶಿಂಶ ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆದಿದೆ.

‘ನಮ್ಮ ಮಣ್ಣಿನ ಕಥೆಯೊಂದನ್ನು ನಿರ್ಮಿಸಿದ ಹೆಮ್ಮೆ. ಕನ್ನಡಕ್ಕೊಬ್ಬ ಹೊಸ ಪ್ರತಿಭಾನ್ವಿತ ನಿರ್ದೇಶಕ ಸಿಕ್ಕಿದ್ದಾನೆ. ನಾಯಕನಾಗಿ ನಾಗಭೂಷಣ, ನಾಯಕಿಯಾಗಿ ಅಮೃತಾ ಪ್ರೇಮ್ ಮತ್ತು ಹೊಸ ಪ್ರತಿಭಾನ್ವಿತರ ದಂಡು, ಜೊತೆಗೆ ರಂಗಾಯಣ ರಘು, ತಾರ, ಬಿರಾದರ್ ಅವರಂತಹ ಮೇರು ಕಲಾವಿದರ ಹೆಗಲು ಸಿಕ್ಕಿದೆ. ಸದ್ಯದಲ್ಲೆ ನಿಮ್ಮ ಮುಂದೆ ಸಿನಿಮಾ ಬರಲಿದೆ’ ಎನ್ನುತ್ತಾರೆ ಧನಂಜಯ. ‘ನೆನಪಿರಲಿ’ ಪ್ರೇಮ್ ಪುತ್ರಿ ಅಮೃತಾ ಈ ಚಿತ್ರದ ಮೂಲಕ ಚಂದನವನಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತ ಇಡೀ ಸಿನಿಮಾವನ್ನು ಕಟ್ಟಿಕೊಡಲಾಗಿದೆ ಎಂದಿದೆ ಚಿತ್ರತಂಡ.

ಸಿನಿಮಾಗೆ ವಾಸುಕಿ ವೈಭವ್ ಸಂಗೀತ ನಿರ್ದೇಶನವಿದ್ದು, ಎಸ್.ಕೆ.ರಾವ್ ಕ್ಯಾಮೆರಾ ಹಿಡಿದಿದ್ದಾರೆ. ಚಿತ್ರತಂಡ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.