ಚೆನ್ನೈ: ತಮಿಳು ನಟಿ ಪಾಲಿನ್ ಜೆಸ್ಸಿಕಾ (ದೀಪಾ ಆಕಾ) ಅವರಅಪಾರ್ಟ್‌ಮೆಂಟ್‌ನಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ‘ಪ್ರೇಮ ವೈಫಲ್ಯವೇ ನನ್ನ ಸಾವಿಗೆ ಮುಖ್ಯ ಕಾರಣ’ ಎಂದು ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

29 ವರ್ಷದ ಜೆಸ್ಸಿಕಾ ಅವರ ಮೃತದೇಹ ಭಾನುವಾರ ಚೆನ್ನೈನ ವೀರುಗಾಂಬಿಕಾಂ ನಗರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

‘ದೀಪಾ’ ಎಂದೇ ಜನಪ್ರಿಯವಾಗಿರುವ ಪಾಲಿನ್ ಜೆಸ್ಸಿಕಾ ಇತ್ತೀಚೆಗೆ ಬಿಡುಗಡೆಯಾದ ತಮಿಳಿನ ‘ವೈದಾ’ ಚಿತ್ರದಲ್ಲಿ ನಟಿಸಿದ್ದರು. ತಮಿಳಿನ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಅವರು ಮನೆಮಾತಾಗಿದ್ದರು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಲ್ಪಾಕ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿತ್ತು. ಸದ್ಯ ಮೃತದೇಹವನ್ನು ಆಂಧ್ರಪ್ರದೇಶದಲ್ಲಿರುವ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಕೊಯಂಬೇಡು ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆಗೆ ಶರಣಾದ ದಿನ ಪಾಲಿನ್ ಜೆಸ್ಸಿಕಾ ಆಟೊದಲ್ಲಿ ಅಪಾರ್ಟ್‌ಮೆಂಟ್‌ಗೆ ಬಂದಿರುವುದು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಾರ್ಟ್‌ಮೆಂಟ್‌ಗೆ ಬೇರೆ ಯಾರಾದರೂ ಬಂದಿರುವ ಸಾಧ್ಯತೆ ಕುರಿತು ತನಿಖೆ ನಡೆಸಲಾಗುತ್ತಿದೆ. ಇದು ಆತ್ಮಹತ್ಯೆ ಪ್ರಕರಣವೋ ಅಥವಾ ಯಾರಾದರೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದರೋ ಎಂಬುದರ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.