ತಿರುವನಂತಪುರ: ತೆಲುಗಿನ ಖ್ಯಾತ ಚಿತ್ರ ನಿರ್ದೇಶಕ ಬಿ. ಗೋಪಾಲ್ (ಬೆಜವಾಡ ಗೋಪಾಲ್) ಅವರನ್ನು ಸತ್ಯಜಿತ್ ರೇ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.

ಕೇರಳದ ಸತ್ಯಜಿತ್ ರೇ ಫಿಲ್ಮ್ ಸೊಸೈಟಿಯು ಸ್ಥಾಪಿಸಿರುವ ಈ ಪ್ರಶಸ್ತಿಯು ₹ 10 ಸಾವಿರ ನಗದು, ಸ್ಮರಣಿಕೆಯನ್ನು ಒಳಗೊಂಡಿದೆ.

ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿರುವ ಒಟ್ಟಾರೆ ಕೊಡುಗೆಯನ್ನು ಪರಿಗಣಿಸಿ ಗೋಪಾಲ್ ಅವರನ್ನು ಆಯ್ಕೆ ಮಾಡಲಾಗಿದೆ. ತಮ್ಮ ಸುದೀರ್ಘ ವೃತ್ತಿ ಜೀವನದಲ್ಲಿ ಗೋಪಾಲ್ ಅವರು 30 ತೆಲುಗು ಹಾಗೂ ಎರಡು ಹಿಂದಿ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಅ. 13ರಂದು ಹೈದರಾಬಾದ್ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಮಲಯಾಳ ಚಲನಚಿತ್ರ ನಿರ್ಮಾಪಕ ಬಾಲು ಕಿರಿಯತ್, ಸಂಗೀತ ನಿರ್ದೇಶಕ ಪೆರುಂಬವೂರು ಜಿ. ರವೀಂದ್ರನಾಥ್ ಮತ್ತು ಇತರರು ಪ್ರಶಸ್ತಿಯ ಆಯ್ಕೆ ಸಮಿತಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.