ನವದೆಹಲಿ: 95ನೇ ಆಸ್ಕರ್ ಪ್ರಶಸ್ತಿ ಪ್ರದಾನದ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ ಪಡೆದ ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಭೇಟಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರವು ಜಾಗತಿಕ ಮನ್ನಣೆ ಗಳಿಸಿದೆ. ಚಿತ್ರ ತಂಡವನ್ನು ಭೇಟಿ ಮಾಡುವ ಅವಕಾಶ ಲಭಿಸಿತು. ಅವರು ಭಾರತವನ್ನು ಹೆಮ್ಮೆ ಪಡುವಂತೆ ಮಾಡಿದ್ದಾರೆ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಈ ಚಿತ್ರದ ನಿರ್ದೇಶಕಿ ಕಾರ್ತಿಕಿ ಗೊನ್ಸಾಲ್ವೆಸ್ ಮತ್ತು ಗುನೀತ್ ಮೊಂಗಾ ಅವರನ್ನು ಮೋದಿ ಭೇಟಿ ಮಾಡಿದ್ದಾರೆ.

ಚಿತ್ರದಲ್ಲಿ ಎರಡು ಆನೆಗಳು ಮತ್ತು ಅವುಗಳ ಪಾಲಕರ ನಡುವಿನ ಅವಿನಾಭಾವ ಸಂಬಂಧವನ್ನು ಅದ್ಭುತವಾಗಿ ಚಿತ್ರಿಸಲಾಗಿದೆ.

ಸಿಖ್ಯ ಎಂಟರ್‌ಟೈನ್‌ಮೆಂಟ್‌ನ ಗುನೀತ್ ಮೊಂಗಾ ಮತ್ತು ಅಚಿನ್ ಜೈನ್ ನಿರ್ಮಾಣದಲ್ಲಿ ಈ ಕಿರು ಚಿತ್ರ ಮೂಡಿಬಂದಿದೆ.

'ಹೌಲೌಟ್', 'ಹೌ ಡು ಯು ಮೆಷರ್ ಎ ಇಯರ್?', 'ದಿ ಮಾರ್ಥಾ ಮಿಚೆಲ್ ಎಫೆಕ್ಟ್' ಮತ್ತು 'ಸ್ಟ್ರೇಂಜರ್ ಅಟ್ ದಿ ಗೇಟ್' ಸ್ಪರ್ಧೆಯಲ್ಲಿದ್ದವು. ‘ದಿ ಎಲಿಫೆಂಟ್ ವಿಸ್ಪರರ್ಸ್’ ಪ್ರಶಸ್ತಿ ಪಡೆದುಕೊಂಡಿದೆ.

ಈ ಹಿಂದೆ, ಭಾರತದಿಂದ "ಸ್ಮೈಲ್ ಪಿಂಕಿ" ಮತ್ತು "ಪಿರಿಯಡ್ ಎಂಡ್ ಆಫ್ ಸೆಂಟೆನ್ಸ್" ಸಾಕ್ಷ್ಯಚಿತ್ರ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದವು. ಪಿರಿಯಡ್ ಎಂಡ್ ಆಫ್ ಸೆಂಟೆನ್ಸ್ ಕಿರುಚಿತ್ರವನ್ನು ಮೊಂಗಾ ನಿರ್ಮಿಸಿದ್ದರು.

ಇವನ್ನೂ ಓದಿ: ಪ್ರಭಾಸ್ ಅಭಿನಯದ ’ಆದಿಪುರುಷ್’ ಚಿತ್ರ ತಂಡದಿಂದ ಹೊಸ ಪೋಸ್ಟರ್ ಬಿಡುಗಡೆ

ಪೊನ್ನಿಯನ್ ಸೆಲ್ವನ್- 2 ಸಿನಿಮಾ ಟ್ರೇಲರ್ ಬಿಡುಗಡೆ: ಮುದುಕಿಯಾಗಿ ಐಶ್ವರ್ಯಾ ರೈ!

ತಾಯಿ –ತಂದೆ ಬಳಿಕ ರಾಹುಲ್ ಗಾಂಧಿ ಜೀವನದಲ್ಲಿ ಹೆಚ್ಚು ಪ್ರಭಾವ ಬೀರಿದ್ದಾರೆ: ರಮ್ಯಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.