‘ದಿ ಕಾಶ್ಮೀರ್ ಫೈಲ್ಸ್’ ಖ್ಯಾತಿಯ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಹೊಸ ಸಿನಿಮಾ ‘ದಿ ವ್ಯಾಕ್ಸಿನ್ ವಾರ್’ ಸೆ.28ರಂದು ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ‘ಕಾಂತಾರ’ ಸಿನಿಮಾ ನಾಯಕಿ ಸಪ್ತಮಿ ಗೌಡ ನಟಿಸಿರುವುದು ವಿಶೇಷ.

‘ಕಾಂತಾರ’ ಸಿನಿಮಾ ಬಳಿಕ ಸಪ್ತಮಿ, ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ ನಟನೆಯ, ಕೃಷ್ಣ ಅವರು ಆ್ಯಕ್ಷನ್ ಕಟ್ ಹೇಳಿರುವ ‘ಕಾಳಿ’ ಸಿನಿಮಾಗೆ ಕಾಲ್ಶೀಟ್ ನೀಡಿದ್ದರು. ಇದಾದ ಬಳಿಕ ‘ದಿ ವ್ಯಾಕ್ಸಿನ್ ವಾರ್’ನಲ್ಲಿ ನಟಸುತ್ತಿರುವ ಸುದ್ದಿ ಹೊರಬಿದ್ದಿತ್ತು. ಈ ಪ್ರಾಜೆಕ್ಟ್ ಪೂರ್ಣಗೊಳಿಸಿದ್ದ ಸಪ್ತಮಿ, ಹೊಂಬಾಳೆ ಫಿಲ್ಮ್ಸ್ ಜೊತೆಗೆ ಮತ್ತೆ ಕೈಜೋಡಿಸಿದ್ದರು. ‘ರಾಜಕುಮಾರ’ ಸಿನಿಮಾ ಖ್ಯಾತಿಯ ನಿರ್ದೇಶಕ ಸಂತೋಷ್ ಆನಂದರಾಮ್ ಆ್ಯಕ್ಷನ್ ಕಟ್ ಹೇಳುತ್ತಿರುವ ‘ಯುವ’ ಸಿನಿಮಾದಲ್ಲಿ ಯುವ ರಾಜ್ಕುಮಾರ್ಗೆ ಜೋಡಿಯಾಗಿದ್ದರು.

‘ದಿ ವ್ಯಾಕ್ಸಿನ್ ವಾರ್’ ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆಯಾಗಿದ್ದು, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ಕಾರ್ಯನಿರ್ವಹಿಸುವ ಸಂಶೋಧಕಿಯಾಗಿ ಸಪ್ತಮಿ ಕಾಣಿಸಿಕೊಂಡಿದ್ದರು. ಕೋವಿಡ್ ಲಸಿಕೆಯ ಸುತ್ತ ಸಾಗುವ ಕಥೆಯಲ್ಲಿ ಪಲ್ಲವಿ ಜೋಶಿ, ಅನುಪಮ್ ಖೇರ್, ನಾನಾ ಪಾಟೇಕರ್ ಮತ್ತು ಸಪ್ತಮಿ ಗೌಡ ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ದಿ ಕಾಶ್ಮೀರಿ ಫೈಲ್ಸ್’ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಸೆ.28ರಂದು ಪ್ರಭಾಸ್ ನಟನೆಯ ಪ್ಯಾನ್ ಇಂಡಿಯಾ ಚಿತ್ರ ‘ಸಲಾರ್’ ಕೂಡ ರಿಲೀಸ್ ಆಗುತ್ತಿದ್ದು, ಅಂದೇ ‘ದಿ ವ್ಯಾಕ್ಸಿನ್ ವಾರ್’ ಚಿತ್ರವು 11 ಭಾಷೆಗಳಲ್ಲಿ ತೆರೆ ಕಾಣಲಿದೆ ಎಂದಿದೆ ಚಿತ್ರತಂಡ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.