ಕ್ರೇಜಿ಼ಸ್ಟಾರ್ ವಿ.ರವಿಚಂದ್ರ ಅವರ ದ್ವಿತೀಯ ಪುತ್ರ ವಿಕ್ರಮ್ ನಟಿಸಿರುವ ಚೊಚ್ಚಲ ಸಿನಿಮಾ ‘ತ್ರಿವಿಕ್ರಮ’ ಜೂನ್ 24ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಹಾಡುಗಳ ಮೂಲಕ ಗಮನ ಸೆಳೆದಿರುವ ಚಿತ್ರತಂಡ, ಪ್ರೇಕ್ಷಕರನ್ನು ನೇರವಾಗಿ ಭೇಟಿಯಾಗಲು ಉತ್ತರ ಕರ್ನಾಟಕ ಪ್ರವಾಸ ಹಮ್ಮಿಕೊಂಡಿದೆ.

ಜೂನ್ 13ರಂದು ದಾವಣಗೆರೆಯಿಂದ ಪ್ರಯಾಣ ಆರಂಭಿಸಲಿದೆ. 14ರಂದು ಹುಬ್ಬಳ್ಳಿ-ಧಾರವಾಡ, 15ರಂದು ಬೆಳಗಾವಿ ಹಾಗೂ 16ರಂದು ಬಳ್ಳಾರಿ ಮತ್ತು ಹೊಸಪೇಟೆಯ ಪ್ರಮುಖ ಸ್ಥಳಗಳು, ಕಾಲೇಜುಗಳಿಗೆ ಭೇಟಿ ನೀಡಲಿದೆ. ಬಳಿಕ ಮಂಡ್ಯ, ಮದ್ದೂರು ಹಾಗೂ ಮೈಸೂರು ಸುತ್ತಮುತ್ತ ಪ್ರದೇಶಗಳಿಗೆ ಭೇಟಿ ನೀಡುವ ಯೋಜನೆ ಚಿತ್ರತಂಡಕ್ಕಿದೆ.

ಜೂನ್ 19ರಂದು ದೊಡ್ಡ ಮಟ್ಟದಲ್ಲಿ ಬಿಡುಗಡೆಪೂರ್ವ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಾನಾ ಭಾಷೆಯ ತಾರೆಯರು ಆಗಮಿಸುವ ನಿರೀಕ್ಷೆಯಿದೆ. ಅದೇ ವೇದಿಕೆಯಲ್ಲಿ ‘ತ್ರಿವಿಕ್ರಮ’ ಟ್ರೇಲರ್ ಅನಾವರಣಗೊಳ್ಳಲಿದೆ.

ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳಿಗೆ ಭೂಷಣ್ ಕೊರಿಯೋಗ್ರಫಿ ಮಾಡಿದ್ದಾರೆ. ವರ್ಣಮಯವಾಗಿ ಆಗಿ ಮೂಡಿಬಂದಿರುವ ಚಿತ್ರದ ಹಾಡುಗಳು ಎ2 ಮ್ಯೂಸಿಕ್ ಯೂಟ್ಯೂಬ್ ಚಾನಲ್ನಲ್ಲಿ ಬಿಡುಗಡೆಯಾಗಿವೆ.

ಸೋಮಣ್ಣ ಟಾಕೀಸ್ ಬ್ಯಾನರ್ ಅಡಿಯಲ್ಲಿ ತಯಾರಾಗಿರುವ ಈ ಚಿತ್ರಕ್ಕೆ ರಾಮ್ಕೋ ಸೋಮಣ್ಣ ಬಂಡವಾಳ ಹೂಡಿದ್ದಾರೆ. ಸಹನಾ ಮೂರ್ತಿ ಚಿತ್ರದ ನಿರ್ದೇಶಕರು.

ತುಳಸಿ, ಸುಚೇಂದ್ರ ಪ್ರಸಾದ್, ಸಾಧುಕೋಕಿಲ, ರೋಹಿತ್ ರಾಯ್, ಜಯಪ್ರಕಾಶ್, ಶಿವಮಣಿ, ಆದಿ ಲೋಕೇಶ್, ನಾಗೇಂದ್ರ ಶಾ, ಚಿಕ್ಕಣ್ಣ ತಾರಾಗಣದಲ್ಲಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.