ನಟ ತಿಲಕ್ ಅಭಿನಯದ ‘H/34 ಪಲ್ಲವಿ ಟಾಕೀಸ್’ ಚಿತ್ರವು ಜೂನ್ ಎರಡನೇ ವಾರದಲ್ಲಿ ಒಟಿಟಿ ವೇದಿಕೆ ಮುಖಾಂತರ ತೆರೆ ಕಾಣಲಿದ್ದು, ಚಿತ್ರದ ಹಾಡೊಂದನ್ನು ಆನಂದ್ ಆಡಿಯೊ ಮೂಲಕ ಬಿಡುಗಡೆ ಮಾಡಲಾಗಿದೆ.

ಶ್ರೀನಿವಾಸ್ ಚಿಕ್ಕಣ್ಣ (ಸೀನಿ) ಅವರು ಬರೆದ ಈ ‘ಬರೆವೆ ಬರೆವೆ ಒಲವ ಕವನ’ ಹಾಡನ್ನು ಬಾಲಿವುಡ್ನ ಖ್ಯಾತ ಗಾಯಕ ಅಂಕಿತ್ ತಿವಾರಿ ಹಾಡಿದ್ದು,ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಕಾಲಭೈರವ ಆರ್ಟ್ಸ್ ಲಾಂಛನದಲ್ಲಿ ಮಂಜುನಾಥ್ ಕೆ. ಹಾಗೂ ರವಿಕಿರಣ್ ಎಂ. ಗೌಡ ನಿರ್ಮಿಸಿರುವ ಈ ಚಿತ್ರವನ್ನು ಶ್ರೀನಿವಾಸ್ ಚಿಕ್ಕಣ್ಣ ನಿರ್ದೇಶಿಸಿದ್ದಾರೆ.

ಈ ಹಿಂದೆ ‘6ನೇ ಮೈಲಿ’ ಚಿತ್ರವನ್ನು ನಿರ್ದೇಶಿಸಿದ್ದ, ಶ್ರೀನಿವಾಸ್ ಚಿಕ್ಕಣ್ಣ ಅವರಿಗೆ ಇದು ಎರಡನೇ ಚಿತ್ರ. ಹಾರಾರ್ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಆಧಾರಿತ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ ಹಾಗೂ ಅಕ್ಷಯ್ ಪಿ. ರಾವ್ ಸಂಕಲನ ಈ ಚಿತ್ರಕ್ಕಿದೆ. ತಿಲಕ್ ಅವರಿಗೆ ನಾಯಕಿಯಾಗಿ ಯಜ್ಞಾ ಶೆಟ್ಟಿ ಅಭಿನಯಿಸಿದ್ದಾರೆ. v

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.