ಹೈದರಾಬಾದ್: ತೆಲುಗು ಚಿತ್ರರಂಗದ ಹಾಸ್ಯ ನಟ 52 ವರ್ಷದ ಅಲ್ಲು ರಮೇಶ್ ಅವರು ಹೃದಯ ಸ್ತಂಭನದಿಂದ ಬುಧವಾರ ಬೆಳಿಗ್ಗೆ ವಿಶಾಖಪಟ್ಟಣದಲ್ಲಿ ಮೃತಪಟ್ಟಿದ್ದಾರೆ.

ಎದೆನೋವಿನಿಂದ ಮನೆಯಲ್ಲಿ ಕುಸಿದು ಬಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ವಿಶಾಖಪಟ್ಟಣಂ ಮೂಲದ ಅಲ್ಲು ರಮೇಶ್ ಅವರು ಚಿರುಜಲ್ಲು, ವೇದಿ, ಬ್ಲೇಡ್ ಬಾಬ್ಜಿ, ನೆಪೋಲಿಯನ್ ಸೇರಿದಂತೆ 50 ಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಸ್ಯ ಹಾಗೂ ಪೋಷಕ ನಟನಾಗಿ ಅಭಿನಯಿಸಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದು, ಅವರ ನಿಧನಕ್ಕೆ ತೆಲುಗು ಚಿತ್ರರಂಗದ ಅನೇಕರು ಕಂಬನಿ ಮಿಡಿದಿದ್ದಾರೆ.

ಭಾರತದಲ್ಲಿನ ತನ್ನ ವ್ಯವಹಾರ ಮಾದರಿ ಯಶಸ್ವಿ ಎಂದ ನೆಟ್ಫ್ಲಿಕ್ಸ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.