ಮುಂಬೈ: ಭಾರತದ ಗಾನ ಕೋಗಿಲೆ, ಭಾರತ ರತ್ನ ಲತಾ ಮಂಗೇಶ್ಕರ್ (92) ಅವರ ಗೌರವಾರ್ಥ ರಾಷ್ಟ್ರದಾದ್ಯಂತ ಎರಡು ದಿನ ಶೋಕಾಚರಣೆ ನಡೆಸಲು ಸರ್ಕಾರ ನಿರ್ಧರಿಸಿದೆ. ನಗರದ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲತಾ ಮಂಗೇಶ್ಕರ್ ಭಾನುವಾರ ನಿಧನರಾದರು.

ಎರಡು ದಿನ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುತ್ತದೆ ಎಂದು ಸರ್ಕಾರದ ಮೂಲಗಳಿಂದ ತಿಳಿದು ಬಂದಿರುವುದಾಗಿ ಎಎನ್‌ಐ ಟ್ವೀಟಿಸಿದೆ.

ಪಾರ್ಥಿವ ಶರೀರವನ್ನು ಅವರ ನಿವಾಸದಲ್ಲಿ ಇಡಲಾಗಿದ್ದು, ಇಂದು ಸಂಜೆ 6:30ಕ್ಕೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನಡೆಯಲಿದೆ.

ಕೋವಿಡ್–19 ದೃಢಪಟ್ಟ ಕಾರಣ ಜನವರಿ 8ರಂದು ಲತಾ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಇದನ್ನೂ ಓದಿ: ಖ್ಯಾತ ಗಾಯಕಿ 'ಗಾನ ಕೋಗಿಲೆ' ಲತಾ ಮಂಗೇಶ್ಕರ್ ಇನಿಲ್ಲ

ಲತಾ ದೀದಿ ಅವರ ಅಗಲಿಕೆಯಿಂದ ದೇಶದಲ್ಲಿ ಶೂನ್ಯ ಆವರಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟಿಸಿದ್ದಾರೆ.

1942ರಿಂದ ಆರಂಭವಾದ ಅವರ ಗಾಯನ ಯಾನದಲ್ಲಿ 30,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.

ಇದನ್ನೂ ಓದಿ: ನೆಹರೂ ಕಣ್ಣಲ್ಲಿ ಕಂಬನಿ ತರಿಸಿದ ಲತಾ ಹಾಡಿದ 'ಏ ಮೇರೆ ವತನ್ ಕೇ ಲೋಗೋ'

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.