ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆ್ಯಕ್ಷನ್ ಕಟ್ ಹೇಳುತ್ತಿರುವ, ಶಿವರಾಜ್‌ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ.ಶೆಟ್ಟಿ ಜೊತೆಯಾಗಿ ಕಾಣಿಸಿಕೊಳ್ಳಲಿರುವ ‘45’ ಸಿನಿಮಾದ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲವಿದೆ.

ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಈ ಸಿನಿಮಾದ ಚಿತ್ರೀಕರಣ ಅಂತಿಮ ಹಂತಕ್ಕೆ ತಲುಪಿದ್ದು, ಇತ್ತೀಚೆಗೆ ಉಪೇಂದ್ರ ಜನ್ಮದಿನದಂದು ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಭಿನ್ನವಾದ ಲುಕ್‌ನಲ್ಲಿ ಉಪೇಂದ್ರ ಕಾಣಿಸಿಕೊಂಡಿದ್ದಾರೆ. ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಈ ಸಿನಿಮಾ ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳದಲ್ಲಿ ತೆರೆಕಾಣಲಿದೆ. ಚಿತ್ರಕ್ಕೆ ಅರ್ಜುನ್ ಜನ್ಯ ಅವರೇ ಚಿತ್ರಕಥೆ ಬರೆದಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದ ‘ಗಾಳಿಪಟ 2’ ಚಿತ್ರದ ಬಳಿಕ ರಮೇಶ್ ರೆಡ್ಡಿ ಅವರ ಸೂರಜ್ ಪ್ರೊಡಕ್ಷನ್ಸ್‌ನ ಎರಡನೇ ಸಿನಿಮಾವಿದು.

ಸಿನಿಮಾ ಅದ್ಧೂರಿಯಾಗಿ ನಿರ್ಮಾಣವಾಗಿದ್ದು, ಶಿವರಾಜ್‌ಕುಮಾರ್ ಪಾತ್ರ ಪ್ರವೇಶದ ಚಿತ್ರೀಕರಣಕ್ಕಾಗಿ ಸಾವಿರ ಜನ ಜೂನಿಯರ್ ಆರ್ಟಿಸ್ಟ್‌ಗಳನ್ನು ಬಳಸಿಕೊಳ್ಳಲಾಗಿತ್ತು. ಚಿತ್ರದ 10–12 ನಿಮಿಷದ ಕ್ಲೈಮ್ಯಾಕ್ಸ್ ದೃಶ್ಯಗಳಿಗೇ 30 ದಿನಗಳ ಶೂಟಿಂಗ್ ಯೋಜನೆಯ ಹಾಕಿಕೊಂಡಿದ್ದೇವೆ. ಸಾಹಸ ನಿರ್ದೇಶಕ ರವಿ ವರ್ಮಾ ಅವರು ಇದನ್ನು ನಿರ್ದೇಶಿಸಲಿದ್ದಾರೆ ಎಂದು ಅರ್ಜುನ್ ಜನ್ಯ ಇತ್ತೀಚೆಗೆ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.