‘ಟಗರು’ ಸಿನಿಮಾದಲ್ಲಿ ತಮ್ಮ ಅಭಿನಯ ಹಾಗೂ ಕಂಚಿನ ಕಂಠದ ಮೂಲಕ ಪ್ರೇಕ್ಷಕರನ್ನು ಸೆಳೆದ ನಟ ವಸಿಷ್ಠ ಸಿಂಹ ‘ವಿಐಪಿ’ಯಾಗಿ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ.

ಇತ್ತೀಚೆಗೆ ವಸಿಷ್ಠ ನಟನೆಯ ಹೊಸ ಸಿನಿಮಾದ ಶೀರ್ಷಿಕೆ ಘೋಷಣೆಯಾಗಿದೆ. ಕಲಾ ಸೃಷ್ಟಿ ಪ್ರೊಡಕ್ಷನ್ಸ್ ನಿರ್ಮಾಣದ, ಬ್ರಹ್ಮ ನಿರ್ದೇಶನದ ಈ ಚಿತ್ರ ವಿಭಿನ್ನ ಕಥಾಹಂದರ ಹೊಂದಿದೆ. ವಸಿಷ್ಠ ಸಿಂಹ ಅವರು ಈ ಚಿತ್ರದಿಂದ ‘ರಾಯಲ್ ಸ್ಟಾರ್’ ಆಗಿ ಮಿಂಚಲಿದ್ದಾರೆ ಎಂದಿದೆ ಚಿತ್ರತಂಡ. ಬೆಂಗಳೂರಿನ ಸುತ್ತಮುತ್ತ ಚಿತ್ರದ ಚಿತ್ರೀಕರಣ ಅದ್ದೂರಿಯಾಗಿ ಬಿರುಸಿನಿಂದ ಸಾಗಿದೆ. ಕೊಡಗು, ಸಕಲೇಶಪುರದಲ್ಲೂ ಚಿತ್ರೀಕರಣ ನಡೆಯಲಿದೆ ಎಂದು ತಂಡ ಮಾಹಿತಿ ನೀಡಿದೆ. ನಿರ್ದೇಶಕ ಬ್ರಹ್ಮ ಈ ಹಿಂದೆ ರಾಗಿಣಿ ದ್ವಿವೇದಿ ನಟನೆಯ ‘ಸಾರಿ ಕರ್ಮ ರಿಟರ್ನ್ಸ್’ ಚಿತ್ರ ನಿರ್ದೇಶಿಸಿದ್ದರು.

ಕ್ರೈಮ್ ಥ್ರಿಲ್ಲರ್ ಹಾಗೂ ರಿವೇಂಜ್ ಕಥಾಹಂದರ ಹೊಂದಿರುವ ಈ ಚಿತ್ರ ನಾನ್ ಲೀನಿಯರ್ ಸ್ಕ್ರೀನ್ ಪ್ಲೇ ಹೊಂದಿದೆ. ಮೋಹನ್ ಕುಮಾರ್ ‘ವಿಐಪಿ’ ಚಿತ್ರಕ್ಕೆ ಕಥೆ ಬರೆದಿದ್ದು, ರಾಜೀವ್ ಗಣೇಶನ್ ಚಿತ್ರಕಥೆ ಬರೆದು ಛಾಯಾಗ್ರಾಹಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನ, ಸತೀಶ್ ಚಂದ್ರಯ್ಯ ಸಂಕಲನ ಹಾಗೂ ಕೆಜಿಎಫ್ ಖ್ಯಾತಿಯ ವಿಕ್ರಮ್ ಮೋರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಖ್ಯಾತ ಕಲಾವಿದರು ಚಿತ್ರದಲ್ಲಿ ನಟಿಸುತ್ತಿದ್ದು, ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ನೀಡುವುದಾಗಿ ಕಾರ್ಯಕಾರಿ ನಿರ್ಮಾಪಕ ಅಫ್ಜಲ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.