ವಿಕ್ರಮ್ ಪ್ರಭು ನಿರ್ದೇಶನದ ಚೊಚ್ಚಲ ಚಿತ್ರ, ಡಾರ್ಕ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ವೆಡ್ಡಿಂಗ್ ಗಿಫ್ಟ್’ ಜೂನ್ನಲ್ಲಿ ತೆರೆಕಾಣಲಿದೆ. ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.

ಈ ಚಿತ್ರದ ಮುಖಾಂತರ ಖ್ಯಾತ ನಟಿ ಪ್ರೇಮ ಅವರು ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ‘ಉಪೇಂದ್ರ ಮತ್ತೆ ಬಾ’ ಸಿನಿಮಾ ನಂತರ ಸ್ಯಾಂಡಲ್ವುಡ್ನಿಂದ ಪ್ರೇಮ ಕೆಲ ವರ್ಷ ದೂರವೇ ಉಳಿದಿದ್ದರು. ‘ಕೆಲವು ಹೆಣ್ಣು ಮಕ್ಕಳು ಕಾನೂನನ್ನು ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬುದೇ ಕಥಾಹಂದರ. ಪ್ರೇಮ ಅವರು ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಿಶಾಂತ್, ಸೋನು ಗೌಡ, ಅಚ್ಯುತಕುಮಾರ್, ಪವಿತ್ರ ಲೋಕೇಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಮೇಯಲ್ಲಿ ಪ್ರಚಾರ ಆರಂಭಿಸಿ ಜೂನ್ನಲ್ಲಿ ಚಿತ್ರವನ್ನು ತೆರೆಗೆ ತರುತ್ತೇವೆ’ ಎಂದರು ನಿರ್ಮಾಪಕ ಹಾಗೂ ನಿರ್ದೇಶಕ ವಿಕ್ರಮ್ ಪ್ರಭು.

‘ನಾನು ದುಡ್ಡಿಗಾಗಿ ಸಿನಿಮಾ ಮಾಡುವವಳಲ್ಲ. ಉತ್ತಮ ಕಥೆ ಇದ್ದರೆ ಮಾತ್ರ ನಟಿಸುತ್ತೇನೆ. ಈ ಚಿತ್ರದ ಕಥೆ ಕೇಳಿದ ತಕ್ಷಣ ಪಾತ್ರ ಮಾಡಬೇಕನ್ನಿಸಿತು. ಚಿತ್ರ ಚೆನ್ನಾಗಿ ಮೂಡಿಬಂದಿದೆ. ನಾಯಕನ ಪರ ವಕಾಲತ್ತು ವಹಿಸುವ ವಕೀಲೆಯಾಗಿ ನಾನು ಕಾಣಿಸಿಕೊಂಡಿದ್ದೇನೆ’ ಎಂದರು ಪ್ರೇಮ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.