ಮುಂಬೈ: ಬಾಲಿವುಡ್ ನಟಿ ಯಾಮಿ ಗೌತಮ್ ಅಭಿನಯದ ‘ಆರ್ಟಿಕಲ್ 370 ‘ ಚಿತ್ರವು ಮೊದಲ ದಿನ ಸುಮಾರು ₹6.12 ಕೋಟಿ ಗಳಿಸಿದೆ ಎಂದು ಚಿತ್ರತಂಡ ತಿಳಿಸಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ನಿರ್ಮಾಣ ಸಂಸ್ಥೆ ಜಿಯೋ ಸ್ಟುಡಿಯೋಸ್, ಚಿತ್ರವು ಒಂದು ದೇಶ, ಒಂದು ಸಂವಿಧಾನದ ಶಕ್ತಿ ಎಂದು ಹೇಳಿದೆ.

ಶುಕ್ರವಾರ ಫೆ. 23ರಂದು ಚಿತ್ರಮಂದಿರಗಳಲ್ಲಿ ‘ಆರ್ಟಿಕಲ್ 370‘ ತೆರೆಕಂಡಿದೆ.

ಈ ಚಿತ್ರಕ್ಕೆ ಆದಿತ್ಯ ಸುಹಾಸ್ ಜಂಬಳೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ನಟಿ ಪ್ರಿಯಮಣಿ ಸಹ ಅಭಿನಯಿಸಿದ್ದು, ನೈಜ ಕಥೆ ಆಧಾರಿತ ಸಿನಿಮಾ ಇದಾಗಿದೆ ಎಂದು ಚಿತ್ರತಂಡ ತಿಳಿಸಿದೆ.

2019ರ ಆಗಸ್ಟ್ 5ರಂದು ಕೇಂದ್ರ ಸರ್ಕಾರವು ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.