ಯೋಗರಾಜ್ ಭಟ್ ನಿರ್ದೇಶಿಸಿರುವ ಗರಡಿ ಸಿನಿಮಾದ ‘ಬಡವನ ಹೃದಯ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಗೀತೆಗೆ ಯೋಗರಾಜ್ ಭಟ್ ಅವರ ಸಾಹಿತ್ಯವಿದ್ದು, ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ವಿಜಯ್ ಪ್ರಕಾಶ್ ಪ್ರಕಾಶ್ ಈ ಗೀತೆಗೆ ಧ್ವನಿಯಾಗಿದ್ದಾರೆ.

ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಚಿತ್ರದಲ್ಲಿ ಯಶಸ್ ಸೂರ್ಯ, ಸೋನಲ್ ಮೊಂತೆರೋ ಜೊತೆಯಾಗಿದ್ದಾರೆ. ಬಿ.ಸಿ ಪಾಟೀಲ್, ನಟ ದರ್ಶನ್ ಕೂಡ ಚಿತ್ರದಲ್ಲಿದ್ದಾರೆ.

‘ಎರಡನೇ ಲಾಕ್ಡೌನ್ ಸಮಯದಲ್ಲೇ ಈ ಹಾಡು ಬರೆದಿದ್ದೆ. ಬಾದಾಮಿ, ಬೆಂಗಳೂರು ಸೇರಿದಂತೆ ಅನೇಕ ಕಡೆ ಹಾಡಿನ ಚಿತ್ರೀಕರಣ ನಡೆದಿದೆ. ದಯಮಾಡಿ ಉರಿಸ ಬೇಡ ಬಡವನ ಹೃದಯ ಎಂಬ ಮೊದಲ ಸಾಲೇ ಎಲ್ಲರ ಮನಸ್ಸಿಗೂ ಹತ್ತಿರವಾಗುತ್ತದೆ’ ಎಂದರು.

‘ನವೆಂಬರ್ 1ರಂದು ರಾಣಿಬೆನ್ನೂರಿನಲ್ಲಿ ಅದ್ದೂರಿಯಾಗಿ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಲಿದೆ. ದರ್ಶನ್ ಅವರು ಕಾರ್ಯಕ್ರಮಕ್ಕೆ ಬರಲಿದ್ದಾರೆ. ನವೆಂಬರ್ 10ರಂದು ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ ಪ್ರೋತ್ಸಾಹಿಸಿ’ ಎಂದರು ನಿರ್ಮಾಪಕ ಬಿ.ಸಿ.ಪಾಟೀಲ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.