‘ಯುವ’ ಸಿನಿಮಾ ಮೂಲಕ ಚಂದನವನಕ್ಕೆ ಹೆಜ್ಜೆ ಇಟ್ಟಿದ್ದ ನಟ ಯುವ ರಾಜ್ಕುಮಾರ್ ಎರಡನೇ ಸಿನಿಮಾವನ್ನು ರೋಹಿತ್ ಪದಕಿ ನಿರ್ದೇಶಿಸಲಿದ್ದಾರೆ.

‘ರತ್ನನ್ ಪ್ರಪಂಚ’ ಖ್ಯಾತಿಯ ರೋಹಿತ್ ಸದ್ಯ ಧನಂಜಯ ನಟನೆಯ ‘ಉತ್ತರಕಾಂಡ’ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸಿನಿಮಾವನ್ನು ಕೆ.ಆರ್.ಜಿ. ಸ್ಟುಡಿಯೊಸ್ ನಿರ್ಮಾಣ ಮಾಡುತ್ತಿದೆ. ಯುವ ರಾಜ್ಕುಮಾರ್ ಎರಡನೇ ಸಿನಿಮಾವನ್ನು ಪಿ.ಆರ್.ಕೆ ಪ್ರೊಡಕ್ಷನ್ಸ್, ಜಯಣ್ಣ ಫಿಲಂಸ್ ಮತ್ತು ಕೆ.ಆರ್.ಜಿ. ಸ್ಟುಡಿಯೊಸ್ ಜಂಟಿಯಾಗಿ ನಿರ್ಮಾಣ ಮಾಡಲಿದ್ದು, ಚಿತ್ರದ ಶೀರ್ಷಿಕೆಯನ್ನು ಸದ್ಯ ‘#ಯುವ02’ ಎಂದು ಇಡಲಾಗಿದೆ. ಇದೇ ಮೊದಲ ಬಾರಿಗೆ ಮೂರು ನಿರ್ಮಾಣ ಸಂಸ್ಥೆಗಳು ಜೊತೆಗೂಡಿ ಕನ್ನಡ ಸಿನಿಮಾವೊಂದನ್ನು ನಿರ್ಮಾಣ ಮಾಡುತ್ತಿದೆ. ಈ ಸಿನಿಮಾದ ಕಥೆಯೂ ರೋಹಿತ್ ಪದಕಿ ಅವರದ್ದು.

ಕನ್ನಡ ರಾಜ್ಯೋತ್ಸವದ ದಿನ ಚಿತ್ರದ ಶೀರ್ಷಿಕೆ ಹಾಗೂ ಫಸ್ಟ್ ಲುಕ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ. ಚಿತ್ರದ ತಾರಾಬಳಗದ ಮಾಹಿತಿಯನ್ನೂ ಶೀಘ್ರದಲ್ಲೇ ನೀಡಲಾಗುವುದು ಎಂದು ಕೆ.ಆರ್.ಜಿ. ಸ್ಟುಡಿಯೊಸ್ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.