ನವದೆಹಲಿ: ಅಮೆಜಾನ್ ಪ್ರೈಮ್ನಲ್ಲಿ ಪ್ರಸಾರವಾಗುವ ‘ತಾಂಡವ್‘ ವೆಬ್ಸರಣಿಯ ನಿರ್ದೇಶಕ ಅಲಿ ಅಬ್ಬಾಸ್ ಝಫರ್ ಅವರನ್ನು ಬಂಧಿಸದಂತೆ ಮಧ್ಯಂತರ ತಡೆ ನೀಡಲು ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿತು.

ಅಲ್ಲದೇ, ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ಗಳನ್ನು ರದ್ದುಪಡಿಸುವಂತೆ ಇತರರು ಸಲ್ಲಿಸಿದ್ದ ಅರ್ಜಿಯನ್ನು ಸಹ ಸುಪ್ರೀಂಕೋರ್ಟ್ ಮಾನ್ಯ ಮಾಡಲಿಲ್ಲ. ಈ ಸಂಬಂಧ ಉತ್ತರ ಪ್ರದೇಶ, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿತು.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್.ಸುಭಾಷ್ರೆಡ್ಡಿ, ಎಂ.ಆರ್.ಶಾ ಅವರಿರುವ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.

ಈ ಸಂಬಂಧ ಪ್ರತಿಕ್ರಿಯೆ ಸಲ್ಲಿಸುವಂತೆ ಕರ್ನಾಟಕ, ಮಹಾರಾಷ್ಟ್ರ, ಬಿಹಾರ ಹಾಗೂ ದೆಹಲಿ ರಾಜ್ಯ ಸರ್ಕಾರಗಳಿಗೂ ಸೂಚನೆ ನೀಡಿದೆ.

‘ತಾಂಡವ್’ ವೆಬ್ಸರಣಿಯಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆಯುಂಟು ಮಾಡಲಾಗಿದೆ ಎಂದು ಆರೋಪಿಸಿ ವೆಬ್ಸರಣಿ ನಿರ್ಮಾಪಕ ಜಫರ್, ಅಮೆಜಾನ್ ಪ್ರೈಮ್ ಇಂಡಿಯಾದ ಮುಖ್ಯಸ್ಥೆ ಅಪರ್ಣಾ ಪುರೋಹಿತ್, ನಿರ್ಮಾಪಕ ಹಿಮಾಂಶು ಮೆಹ್ರಾ, ಚಿತ್ರಕತೆ ರಚನೆಕಾರ ಗೌರವ್ ಸೋಳಂಕಿ, ನಟ ಮೊಹಮ್ಮದ್ ಜೀಶನ್ ಅಯ್ಯೂಬ್ ಅವರ ವಿರುದ್ಧ ದೂರುಗಳು ದಾಖಲಾಗಿವೆ.

ಈ ದೂರುಗಳ ಆಧಾರದ ಮೇಲೆ ಇವರ ವಿರುದ್ಧ ವಿವಿಧ ರಾಜ್ಯಗಳಲ್ಲಿ ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ತಮ್ಮ ವಿರುದ್ಧದ ಎಫ್ಐಆರ್ಗಳನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.