ಬೆಂಗಳೂರು: ಹಿರಿಯ ರಂಗಕರ್ಮಿ ಜಿ.ಕೆ.ಗೋವಿಂದ ರಾವ್ (86) ಅವರು ಇಂದು (ಶುಕ್ರವಾರ) ಬೆಳಿಗ್ಗೆ ಹುಬ್ಬಳ್ಳಿಯ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ.

ಜಿ.ಕೆ. ಗೋವಿಂದ ರಾವ್ 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದ್ದರು. ಇಂಗ್ಲಿಷ್ ಸಾಹಿತ್ಯದ ಅಧ್ಯಯನ ನಡೆಸಿದ ಅವರು ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ರಂಗಭೂಮಿ, ಸಿನಿಮಾರಂಗದ ಒಡನಾಟ ಅವರಿಗಿದೆ.

ಇದನ್ನೂ ಓದಿ... ಸಾವಿನಲ್ಲೂ ಸಾರ್ಥಕತೆ: ಪ್ರೊ. ಜಿ.ಕೆ. ಗೋವಿಂದರಾವ್ ನೇತ್ರದಾನ

ಈಶ್ವರ ಅಲ್ಲಾ (ಕಿರು ಕಾದಂಬರಿ), ಶೇಕ್ಸ್ಪಿಯರ್ ಎರಡು ನಾಟಕಗಳ ಅಧ್ಯಯನ, ಶೇಕ್ಸ್ಪಿಯರ್ ಸಂವಾದ (ವಿಮರ್ಶಾ ಲೇಖನಗಳು), ನಡೆ-ನುಡಿ, ನಾಗರಿಕತೆ ಮತ್ತು ಅರಾಜಕತೆ, ಬಿಂಬ ಪ್ರತಿಬಿಂಬ, ಕ್ರಿಯೆ ಪ್ರತಿಕ್ರಿಯೆ, ಮನು ವರ್ಸಸ್ ಅಂಬೇಡ್ಕರ್: ತಮ್ಮ ಆಯ್ಕೆ ಯಾವುದು? (ಸಂಕೀರ್ಣ ಬರಹಗಳ ಸಂಗ್ರಹಗಳು) ಸೇರಿದಂತೆ ಹಲವಾರು ಕೃತಿಗಳನ್ನು ರಚಿಸಿದ್ದಾರೆ.

ಗೃಹ, ಮಿಥಿಲೆಯ ಸೀತೆಯರು, ಕರ್ಫ್ಯೂ, ಶಾಸ್ತ್ರಿ ಸೇರಿದಂತೆ ಹಲವು ಚಿತ್ರಗಳಲ್ಲಿಗೋವಿಂದ ರಾವ್ ನಟಿಸಿದ್ದರು.

ಗೋವಿಂದ ರಾವ್ ಅವರಿಗೆ ಇಬ್ಬರು ಪುತ್ರಿಯರು ಇದ್ದಾರೆ.

ಇದನ್ನೂ ಓದಿ... ಗೋವಿಂದರಾವ್ ಜೊತೆಗಿನ ನೆನಪು: ಪುಸ್ತಕ ಪ್ರೀತಿ, ಸಿನಿಮಾ ಪ್ರೀತಿ ಕಲಿಸಿದ ಅಪ್ಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.