ಶಿಗ್ಗಾವಿ: ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷರು ಹಾಗೂ ಗೊಟಗೋಡಿಯ ರಾಕ್ ಗಾರ್ಡನ್ ರೂವಾರಿ, ಹಿರಿಯ ರಂಗಕರ್ಮಿ ಡಾ.ಟಿ.ಬಿ. ಸೊಲಬಕ್ಕನವರ (73) ಗುರುವಾರ ಮಧ್ಯರಾತ್ರಿ 2.45ರ ಸುಮಾರಿಗೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೃತರು ಪತ್ನಿ ಸಾವಿತ್ರಮ್ಮ, ಪುತ್ರಿ ವೇದಾರಾಣಿ, ಪುತ್ರ ರಾಜಹರ್ಷ ಹಾಗೂ ಅಳಿಯ ಉದ್ಯಮಿ ಪ್ರಕಾಶ ದಾಸನೂರ ಅವರನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ರಾಕ್ ಗಾರ್ಡನ್ ಪಕ್ಕ ನ್ಯೂ ವರ್ಕ್ ಶಾಪ್ (ದುಂಡಸಿ ದಾರಿ) ಹತ್ತಿರ ಜರುಗಲಿದೆ.

ಕೋವಿಡ್ ವರದಿ ನೆಗೆಟಿವ್
ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದ ಸೊಲಬಕ್ಕನವರ ಅವರ ವರದಿ ನೆಗೆಟಿವ್ ಬಂದಿದೆ.

ಸೋಂಕಿನ ಲಕ್ಷಣಗಳು ಕಂಡು ಬಂದಿದ್ದರಿಂದ ಪರೀಕ್ಷೆಗೆ ಗಂಟಲು ಹಾಗೂ ಮೂಗಿನ ದ್ರವದ ಮಾದರಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.