ಬೆಂಗಳೂರು: ಕೋಣನಕುಂಟೆ ಬಳಿಯ ವಾಜರಹಳ್ಳಿ ಮುಖ್ಯರಸ್ತೆಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಸಮನ್ವಿ (6) ಮೃತಪಟ್ಟಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸರು, ಲಾರಿ ಚಾಲಕ ಮಂಜೇಗೌಡನನ್ನು ಬಂಧಿಸಿದ್ದಾರೆ.

‘ಕಲರ್ಸ್ ಕನ್ನಡ ವಾಹಿನಿಯ ‘ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ ಹಾಗೂ ಆಕೆಯ ತಾಯಿ ಅಮೃತಾ ನಾಯ್ಡು, ಗುರುವಾರ ಸಂಜೆ 4.30ರ ಸುಮಾರಿಗೆ ಸ್ಕೂಟಿಯಲ್ಲಿ ಮೆಟ್ರೊ ನಿಲ್ದಾಣಕ್ಕೆ ಹೊರಟಿದ್ದಾಗ ಅಪಘಾತ ಸಂಭವಿಸಿತ್ತು.

‘ತಾಯಿ–ಮಗಳು, ವಾಜರಹಳ್ಳಿ ಮುಖ್ಯರಸ್ತೆಯಲ್ಲಿ ಸ್ಕೂಟಿಯಲ್ಲಿ ತೆರಳುತ್ತಿದ್ದರು. ವೇಗದ ಮಿತಿಯನ್ನೂ ದಾಟಿರಲಿಲ್ಲ. ಅದೇ ಮಾರ್ಗದಲ್ಲೇ ಚಾಲಕ ಮಂಜೇಗೌಡ ಲಾರಿಯನ್ನು ವೇಗವಾಗಿ ಚಲಾಯಿಸಿಕೊಂಡು ಹೊರಟಿದ್ದ. ಎದುರಿಗಿದ್ದ ಆಟೊವನ್ನು ಹಿಂದಿಕ್ಕಲು ಮುಂದಾಗಿದ್ದ ಮಂಜೇಗೌಡ, ಲಾರಿಯನ್ನು ಸ್ಕೂಟಿಗೆ ಡಿಕ್ಕಿ ಹೊಡೆಸಿದ್ದ.ಈ ಬಗ್ಗೆ ಚಾಲಕ ಹೇಳಿಕೆ ನೀಡಿದ್ದಾನೆ. ಆತನ ವಿರುದ್ಧ ಎಫ್‌ಐಆರ್ ದಾಖಲಾಗಿದೆ’ ಎಂದು ಸಂಚಾರ ವಿಭಾಗದ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.