ಬೆಂಗಳೂರು: ಬಿಗ್ಬಾಸ್ ಕನ್ನಡ 10ನೇ ಸೀಸನ್ ಮೂರನೇ ರನ್ನರ್ ಅಪ್ ಆಗಿ ವಿನಯ್ ಗೌಡ ಅವರು ಮನೆಯಿಂದ ಹೊರಗೆ ಬಂದಿದ್ದಾರೆ.

ಎಲಿಮಿನೇಷನ್ ಚಕ್ರದ ಕುರ್ಚಿಯಲ್ಲಿ ಕಾರ್ತಿಕ್, ಸಂಗೀತಾ, ಪ್ರತಾಪ್ ಮತ್ತು ವಿನಯ್ ಕೂತಿದ್ದರು. ತಿರುಗುಣಿ ತಿರುಗುತ್ತಿದ್ದ ಹಾಗೆಯೇ ಮೂವರ ಉಸಿರೂ ಅಷ್ಟೇ ಏರಿಳಿಯುತ್ತಿತ್ತು. ಎಲ್ಲ ಸ್ಪರ್ಧಿಗಳು ಕಣ್ಣುಮುಚ್ಚಿ ಪ್ರಾರ್ಥಿಸುತ್ತಿದ್ದರು. ಕೊನೆಗೂ ವಿನಯ್ ಎದುರಿಗೆ ಬಂದಾಗ ಮನೆಯ ಬಾಗಿಲು ತೆರೆದುಕೊಂಡಿತು. ವಿನಯ್ ಮನೆಯಿಂದ ಹೊರಬಂದರು.

ಈಗ ಕೊನೆಯ ಹಣಾಹಣಿಯಲ್ಲಿ ಕಾರ್ತಿಕ್, ಪ್ರತಾಪ್, ಸಂಗೀತಾ ಉಳಿದುಕೊಂಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಜೋರು ಧ್ವನಿ, ವಾಗ್ವಾದಗಳಿಂದಲೇ ಹೆಸರಾಗಿದ್ದ ವಿನಯ್ ಗೌಡ. ‘ನಾನು ವಿಲನ್ ಆಗಲು ಬಂದಿದ್ದೇನೆ’ ಎಂದು ಹೇಳಿಕೊಂಡು ಬಿಗ್ ಬಾಸ್ ಮನೆಗೆ ಬಂದಿದ್ದರು.

ಅತಿ ಹೆಚ್ಚು ಬಾರಿ ಸಂಗೀತಾ, ಕಾರ್ತಿಕ್ ಜೊತೆಗೆ, ನಂತರದ ದಿನಗಳಲ್ಲಿ ಪ್ರತಾಪ್ ಜೊತೆಗೆ ಅವರ ಮಾತಿನ ಚಕಮಕಿ ನಡೆಯುತ್ತಲೇ ಇತ್ತು. ಆದರೆ ಈ ಮೂವರು ಈಗ ಫೈನಲ್ನಲ್ಲಿದ್ದು ವಿನಯ್ ಹೊರಬಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.