ಬಿಗ್ ಬಾಸ್ ಸೀಸನ್ 10 ಪ್ರಾರಂಭವಾಗಿ ಇದೀಗ ಹದಿನಾರು ವಾರಗಳನ್ನು ಪೂರೈಸಿದೆ. ಅಂತಿಮ ವಾರದಲ್ಲಿ 6 ಸ್ಪರ್ಧಿಗಳು ಮನೆಯಲ್ಲಿ ಉಳಿದಿದ್ದಾರೆ. ಬಿಗ್ ಬಾಸ್ ಕಿರೀಟ ಯಾರ ಮುಡಿಗೆ ಹೋಗಲಿದೆ ಎಂಬುವುದಕ್ಕೆ ನಾಳೆ ಉತ್ತರ ಸಿಗಲಿದೆ.

ಇದೆಲ್ಲದರ ನಡುವೆ ಫೈನಲ್‌ಗೆ ಅದ್ದೂರಿಯಾಗಿ ಸಿದ್ಧತೆ ನಡೆಯುತ್ತಿದೆ. ಎಲಿಮಿನೇಟೆಡ್ ಸ್ಪರ್ಧಿಗಳಿಂದ ಹಾಡು, ನೃತ್ಯ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಬಿಗ್ ಬಾಸ್ ಆಯೋಜಿಸಿರುವುದು ಇಂದು ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಕಾಣಬಹುದಾಗಿದೆ.

ಹತ್ತೊಂಬತ್ತು ಸ್ಪರ್ಧಿಗಳ ಎಂಟ್ರಿಯ ಮೂಲಕ ಶುರುವಾಗಿದ್ದ ಈ ಬಾರಿಯ ಬಿಗ್‌ಬಾಸ್ ಹದಿನಾರು ವಾರಗಳನ್ನು ಯಶಸ್ವಿಯಾಗಿ ದಾಟಿದೆ. ಉಳಿದಿರುವ 6 ಸ್ಪರ್ಧಿಗಳು ತಮ್ಮದೇ ಪಯಣದ ಸಿಹಿ-ಕಹಿ ನೆನಪುಗಳ ಮಳೆಯಲ್ಲಿ ತೋಯುತ್ತಿದ್ದಾರೆ. ಸೀಸನ್ ಉದ್ದಕ್ಕೂ ಅವರ ಪ್ರಯಾಣದಲ್ಲಿ ಮಾನಸಿಕವಾಗಿ ಜೊತೆಯಾಗಿದ್ದ ಅವರ ಅಭಿಮಾನಿಗಳು ಈ ಕ್ಷಣ ಮಹತ್ವದ್ದಾಗಿದೆ.

ಬಿಗ್‌ಬಾಸ್ ಕನ್ನಡ ಮತ್ತು ಪ್ರೇಕ್ಷಕರ ನಡುವಿನ ಈ ಸುಧೀರ್ಘ ಪ್ರಯಾಣಕ್ಕೆ ಇಂದು ಮತ್ತು ನಾಳೆ ನಡೆಯಲಿರುವ ಗ್ರ್ಯಾಂಡ್ ಫಿನಾಲೆಯೊಟ್ಟಿಗೆ ಅಲ್ಪವಿರಾಮ ಬೀಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.