ಬೆಂಗಳೂರು: ಕಿರುತೆರೆಯ ಜನಪ್ರಿಯ ಹಾಗೂ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಈ ವಾರದ ಅತಿಥಿಯಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಾಲ್ಗೊಂಡಿದ್ದಾರೆ.

ಈ ಕುರಿತ ಮುನ್ನೋಟದ ಟೀಸರ್ ಅನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಅಧಿಕೃತವಾಗಿ ಡಿ.ಕೆ ಶಿವಕುಮಾರ್ ಹಂಚಿಕೊಂಡಿದ್ದಾರೆ.

‘ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ನನ್ನ ಬದುಕಿನ ಪಯಣವನ್ನು ಪ್ರಪಂಚಕ್ಕೆ ಪರಿಚಯಿಸುವ ಪ್ರಯತ್ನ ಮಾಡಿದೆ. ಇದೇ ಶನಿವಾರ ಹಾಗೂ ಭಾನುವಾರ ನನ್ನ ಬಾಲ್ಯದಿಂದ ಇಲ್ಲಿಯವರೆಗಿನ ಪಯಣದ ಸ್ವಾರಸ್ಯಕರ ಕಥೆಯೊಂದಿಗೆ ನಿಮ್ಮ ಮುಂದೆ ಬರುತ್ತಿದ್ದೇನೆ’ ಎಂದು ಟ್ವೀಟ್ ಮಾಡಿದ್ದಾರೆ.

ಈ ವಿಡಿಯೊ ಡಿ.ಕೆ ಶಿವಕುಮಾರ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಸರ್ಕಾರವನ್ನು ತರಲು ಶ್ರಮಿಸಿದ್ದ ಅವರು ಡಿಸಿಎಂ ಜೊತೆ ಕೆಪಿಸಿಸಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.