ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸ್ಟಾರ್ ಸುವರ್ಣದಲ್ಲಿ ‘ಶ್ರೀ ದೇವೀ ಮಹಾತ್ಮೆ’ 

Published : 8 ಜುಲೈ 2024, 0:46 IST
Last Updated : 8 ಜುಲೈ 2024, 0:46 IST
ಫಾಲೋ ಮಾಡಿ
Comments

ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪೌರಾಣಿಕ ಕಥೆಯನ್ನು ಹೊಂದಿರುವ ‘ಶ್ರೀ ದೇವೀ ಮಹಾತ್ಮೆ’ ಧಾರಾವಾಹಿ ಸೋಮವಾರದಿಂದ ಶನಿವಾರದವರೆಗೆ ರಾತ್ರಿ 7 ಗಂಟೆಗೆ ಪ್ರಸಾರವಾಗುತ್ತಿದೆ.

‘ಈ ಹಿಂದೆ ವಾಹಿನಿಯಲ್ಲಿ ‘ಗುರು ರಾಘವೇಂದ್ರ ವೈಭವ’, ‘ಹರ ಹರ ಮಹಾದೇವ’, ‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ’ ಹಾಗೂ ‘ಎಡೆಯೂರು ಶ್ರೀ ಸಿದ್ದಲಿಂಗೇಶ್ವರ’ದಂತಹ ಧಾರಾವಾಹಿಗಳು ಪ್ರಸಾರಗೊಂಡಿದ್ದವು. ಇದೀಗ ಪೌರಾಣಿಕ ಕಥಾ ಹೊಂದಿರುವ ಮತ್ತೊಂದು ಧಾರಾವಾಹಿ ಪ್ರಾರಂಭಗೊಂಡಿದೆ. ಪುರಾಣಗಳ ಪ್ರಕಾರ ಸತಿಯು ಅತ್ಯಂತ ಸುಂದರವಾಗಿರುತ್ತಾಳೆ. ತಪಸ್ವಿ ಶಿವನಿಗೆ ಮನಸೋಲುವ ಸತಿ, ಮುಂದೆ ಪಾರ್ವತಿಯಾಗಿ ಹೇಗೆ ಮರುಜನ್ಮ ತಾಳುತ್ತಾಳೆ?, ಮಹಾಕಾಳಿಯ ರುದ್ರಾವತಾರವನ್ನು ಏಕೆ ಧರಿಸುತ್ತಾಳೆ? ಎಂಬುದರ ಜೊತೆಗೆ ಜಗನ್ಮಾತೆಯ ಮಹಿಮೆಯನ್ನು, ಪವಾಡಗಳನ್ನು ಈ ಧಾರಾವಾಹಿಯಲ್ಲಿ ತೋರಿಸಲಾಗುತ್ತದೆ’ ಎಂದು ವಾಹಿನಿ ತಿಳಿಸಿದೆ.

ಶಿವನ ಪಾತ್ರವನ್ನು ಅರ್ಜುನ್ ರಮೇಶ್, ಪಾರ್ವತಿಯ ಪಾತ್ರವನ್ನು ಜೀವಿತಾ ವಸಿಷ್ಠ ನಿರ್ವಹಿಸುತ್ತಿದ್ದಾರೆ. ನಂದಿ ಮೂವೀಸ್ ನಿರ್ಮಾಣ ಸಂಸ್ಥೆಯು ಈ ಧಾರಾವಾಹಿಯನ್ನು ನಿರ್ಮಿಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT