ಬೆಂಗಳೂರು: ದೂರದರ್ಶನದಲ್ಲಿ ಮರು ಪ್ರಸಾರವಾಗುತ್ತಿರುವ ‘ರಾಮಾಯಣ’ಧಾರಾವಾಹಿ ವೀಕ್ಷಣೆಯಲ್ಲಿ ವಿಶ್ವದಾಖಲೆ ನಿರ್ಮಿಸಿದೆ.

ಪ್ರಪಂಚದಲ್ಲೇ ಮನರಂಜನೆ ವಿಭಾಗದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದ ಧಾರಾವಾಹಿ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಕಳೆದ ಏಪ್ರಿಲ್ 16ರಂದು ರಾತ್ರಿ 9 ಗಂಟೆಗೆ ಪ್ರಸಾರವಾದ ರಾಮಾಯಣ ಧಾರವಾಹಿಯನ್ನು ಭಾರತ ಸೇರಿದಂತೆ ಪ್ರಪಂಚದಾದ್ಯಂತ 7.7 ಕೋಟಿ ಜನರು ವೀಕ್ಷಿಸಿರುವುದು ವಿಶ್ವದಾಖಲೆಯಾಗಿದೆ.

ಜಾಗತಿಕ ಮನರಂಜನೆ ವಿಭಾಗದಲ್ಲಿ ಇದು ದಾಖಲೆಯ ವೀಕ್ಷಣೆಯಾಗಿದೆ ಎಂದು ದೂರದರ್ಶನ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವ ಮೂಲಕ ಮಾಹಿತಿ ನೀಡಿದೆ.

ರಾಮಾಯಣಭಾರತ ಮಾತ್ರವಲ್ಲದೇ ವಿದೇಶಗಳಲ್ಲೂ ಜನಪ್ರಿಯವಾಗಿದೆ. ಲಾಕ್ಡೌನ್ ಪರಿಣಾಮ ದೂರದರ್ಶನ ಈ ಧಾರವಾಹಿಯನ್ನು ಮರು ಪ್ರಸಾರ ಮಾಡುತ್ತಿದ್ದು. ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ದೂರದರ್ಶನ ನೋಡುವವರಸಂಖ್ಯೆಯಲ್ಲೂ ಹೆಚ್ಚಳವಾಗಿದೆ.

80–90ರ ದಶಕದಲ್ಲಿ ರಾಮಾಯಣ ಮತ್ತು ಮಹಾಭಾರತ ಧಾರಾವಾಹಿಗಳುದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.