ನವದೆಹಲಿ: ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ಧಾರಾವಾಹಿ ಖ್ಯಾತಿಯ ನಟ ಗುರುಚರಣ್ ಸಿಂಗ್ ನಾಪತ್ತೆಯಾಗಿದ್ದಾರೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.

ಗುರುಚರಣ್ ಸಿಂಗ್ ನಾಪತ್ತೆಯಾಗಿರುವ ಬಗ್ಗೆ ಅವರ ತಂದೆ ದೂರು ದಾಖಲಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

‘ಏಪ್ರಿಲ್ 22ರಂದು ಬೆಳಿಗ್ಗೆ 8:30ರ ಸುಮಾರಿಗೆ ಗುರುಚರಣ್ ಸಿಂಗ್ ಅವರು ಮುಂಬೈಗೆ ಹೋಗಲು ವಿಮಾನ ನಿಲ್ದಾಣಕ್ಕೆ ಹೊರಟಿದ್ದರು. ಆದರೆ, ಅವರು ಮುಂಬೈ ತಲುಪಿಲ್ಲ. ದೂರವಾಣಿ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ಸಿಂಗ್ ಅವರ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ’ ಎಂದು ಪೊಲೀಸರು ಹೇಳಿದ್ದಾರೆ.

ಗುರುಚರಣ್ ಸಿಂಗ್ ಪತ್ತೆಗಾಗಿ ಹಲವು ತಂಡಗಳನ್ನು ರಚಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ಧಾರಾವಾಹಿಯು 2022 ಜುಲೈ 2ಕ್ಕೆ 3500 ಸಂಚಿಕೆಗಳನ್ನು ಕಂಡಿದೆ. ಇದು ಅತೀ ದೀರ್ಘ ಧಾರಾವಾಹಿ ಎನಿಸಿಕೊಂಡಿದ್ದು, ದಾಖಲೆ ಬರೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.