ಬೆಂಗಳೂರು: ಕೋವಿಡ್–19 ಎರಡನೇ ಅಲೆ ವಿಪರೀತ ಹಬ್ಬುತ್ತಿರುವ ಕಾರಣ ರಾಜ್ಯ ಸರ್ಕಾರ ಮೇ 10ರಿಂದ ಲಾಕ್‌ಡೌನ್ ಘೋಷಣೆ ಮಾಡಿರುವ ಕಾರಣ ಯಾವುದೇ ಧಾರಾವಾಹಿ, ರಿಯಾಲಿಟಿ ಷೋ ಚಿತ್ರೀಕರಣ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ ಎಂದು ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷ ಎಸ್.ವಿ. ಶಿವಕುಮಾರ್ ತಿಳಿಸಿದ್ದಾರೆ.

‘ಕೋವಿಡ್ –19ನ ಎರಡನೇ ಅಲೆಯ ಹಾವಳಿಯಿಂದಾಗಿ ಚಿತ್ರರಂಗವು ಹಲವಾರು ಕಲಾವಿದರು, ತಂತ್ರಜ್ಞರನ್ನು ಕಳೆದುಕೊಂಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಲಾಕ್‌ಡೌನ್ ಘೋಷಿಸಿರುವುದು ಶ್ಲಾಘನೀಯ’ ಎಂದಿರುವ ಅವರು, ‘ಮೇ 10ರಿಂದ 24ರವರೆಗೆ ಯಾರೂ ಕೂಡಾ ರಾಜ್ಯದ ಯಾವುದೇ ಭಾಗದಲ್ಲಿ ಚಿತ್ರೀಕರಣ ನಡೆಸಲೇಬಾರದು. ಒಂದು ವೇಳೆ ಯಾರಾದರೂ ಕದ್ದು ಮುಚ್ಚಿ ಚಿತ್ರೀಕರಣ ಮಾಡುವುದು ತಿಳಿದು ಬಂದಲ್ಲಿ, ಕೋವಿಡ್ ನಿಯಮ ಉಲ್ಲಂಘನೆ ಪ್ರಕಾರ ಸರ್ಕಾರ ಕೈಗೊಳ್ಳುವ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಮೇ 24ರ ಬಳಿಕ ಪರಿಸ್ಥಿತಿ ಅವಲೋಕಿಸಿ ಚಿತ್ರೀಕರಣ ಪುನರಾರಂಭ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.