ಬೆಂಗಳೂರು: ವೆಂಕಟ ಪ್ರಭು ನಿರ್ದೇಶನದ ಹಾಗೂ ತಮಿಳು ಸೂಪರ್ಸ್ಟಾರ್ ದಳಪತಿ ವಿಜಯ್ ಅಭಿನಯದ 'ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್' ಚಿತ್ರ ಸೆಪ್ಟೆಂಬರ್ 5 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

ನಟ ವಿಜಯ್ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಚಿತ್ರದ ಹೊಸ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. ಪೋಸ್ಟರ್ನಲ್ಲಿ ಚಿತ್ರದ ಬಿಡುಗಡೆ ದಿನಾಂಕವನ್ನು ನಮೂದಿಸಲಾಗಿದೆ.

ಚಿತ್ರದಲ್ಲಿ ಪ್ರಶಾಂತ್, ಪ್ರಭುದೇವ, ಸ್ನೇಹ, ಲೈಲಾ, ಮೀನಾಕ್ಷಿ ಚೌಧರಿ, ಮೋಹನ್, ಜಯರಾಮ್, ಅಜ್ಮಲ್ ಅಮೀರ್ ಮತ್ತು ಯೋಗಿ ಬಾಬು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಯುವನ್ ಶಂಕರ್ ರಾಜಾ ಸಂಗೀತ ಹಾಗೂ ಸಿದ್ಧಾರ್ಥ ನುನಿ ಛಾಯಾಗ್ರಹಣವಿದೆ.

ರಾಜಕೀಯಕ್ಕೆ ಪ್ರವೇಶ:

ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ದಳಪತಿ ವಿಜಯ್ ಇತ್ತೀಚೆಗೆ ಘೋಷಿಸಿದ್ದರು. ತಮ್ಮ ಪಕ್ಷಕ್ಕೆ ‘ತಮಿಳಗ ವೆಟ್ರಿ ಕಳಗಂ’ (ತಮಿಳುನಾಡು ವಿಜಯ ಪಕ್ಷ) ಎಂದು ನಾಮಕರಣ ಮಾಡಿದ್ದು, 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು.
.ತಮಿಳಗ ವೆಟ್ರಿ ಕಳಗಂ: ದಳಪತಿ ವಿಜಯ್ ಹೊಸ ರಾಜಕೀಯ ಪಕ್ಷ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.