ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕೆ ಇಳಿದಿರುವ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. 2018ರಲ್ಲಿ ಕಣಕ್ಕೆ ಇಳಿದಿದ್ದ ಒಟ್ಟು ಅಭ್ಯರ್ಥಿಗಳಲ್ಲಿ ಶೇ 15ರಷ್ಟು ಅಭ್ಯರ್ಥಿಗಳು ಮಾತ್ರ ತಮ್ಮ ವಿರುದ್ಧ ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಘೋಷಿಸಿಕೊಂಡಿದ್ದರು. ಆದರೆ, ಈ ಬಾರಿ ಕಣಕ್ಕೆ ಇಳಿದಿರುವ ಅಭ್ಯರ್ಥಿಗಳಲ್ಲಿ ತಮ್ಮ ವಿರುದ್ಧ ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಹೇಳಿಕೊಂಡವರ ಪ್ರಮಾಣ ಶೇ 22ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ ನಡೆದ ಚುನಾವಣೆಗಳಲ್ಲಿ ಅಪರಾಧ ಹಿನ್ನೆಲೆಯ ಅಭ್ಯರ್ಥಿಗಳು ಗರಿಷ್ಠ ಪ್ರಮಾಣದಲ್ಲಿ ಕಣದಲ್ಲಿ ಇರುವುದು ಇದೇ ಮೊದಲು. ಎಡಿಆರ್ ಬಿಡುಗಡೆ ಮಾಡಿರುವ ‘ಕರ್ನಾಟಕ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳ ಅಪರಾಧಿಕ, ಆರ್ಥಿಕ ಮತ್ತು ಶೈಕ್ಷಣಿಕ ಹಿನ್ನೆಲಯ ವಿಶ್ಲೇಷಣೆ’ ವರದಿಯಲ್ಲಿ ಈ ಮಾಹಿತಿ ಇದೆ