ಭಾರತೀಯ ರಿಸರ್ವ್ ಬ್ಯಾಂಕ್ ₹2000 ಮುಖಬೆಲೆಯ ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ವಾಪಸ್ ಪಡೆಯಲು ಕ್ರಮ ತೆಗೆದುಕೊಂಡಿದೆ. ಈಗ ಚಲಾವಣೆಯಲ್ಲಿರುವ ₹2000 ಮುಖಬೆಲೆಯ ನೋಟುಗಳನ್ನು ಬೇರೆ ಮುಖಬೆಲೆಯ ನೋಟುಗಳಿಗೆ ಬದಲಿಸಿಕೊಳ್ಳಲು ಕಾಲಾವಕಾಶ ನೀಡಿದೆ. 2016ರ ನವೆಂಬರ್‌ನಲ್ಲಿ ಈ ಹಿಂದೆ ಚಲಾವಣೆಯಲ್ಲಿದ್ದ ₹500 ಮತ್ತು ₹1000 ಮುಖಬೆಲೆಯ ನೋಟುಗಳ ಮಾನ್ಯತೆಯನ್ನು ಕೇಂದ್ರ ಸರ್ಕಾರ ರದ್ದು ಮಾಡಿತ್ತು. ಅವುಗಳ ಬದಲಿಗೆ ₹2000 ಮತ್ತು ₹500 ಮುಖಬೆಲೆಯ ಹೊಸ ನೋಟುಗಳನ್ನು ಚಲಾವಣೆಗೆ ತರಲಾಗಿತ್ತು. ಆದರೆ, ಹೊಸದಾಗಿ ಚಲಾವಣೆಗೆ ತಂದು ಏಳು ವರ್ಷ ಕಳೆಯುವಷ್ಟರಲ್ಲೇ ₹2000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ತೆಗೆದುಹಾಕಲು ನಿರ್ಧರಿಸಲಾಗಿದೆ. ಸರ್ಕಾರದ ಈ ನಿರ್ಧಾರಗಳಿಗೆ ವಿರೋಧ ಪಕ್ಷಗಳಿಂದ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬಳಕೆದಾರರಿಂದ ಆಕ್ಷೇಪ ಹಾಗೂ ಟೀಕೆಗಳು ವ್ಯಕ್ತವಾಗುತ್ತಿವೆ