ಕಬ್ಬಿಣದ ಅದಿರನ್ನು ಅರಣ್ಯ ಉತ್ಪನ್ನಗಳ ವ್ಯಾಪ್ತಿಯಿಂದ ಹೊರಗಿಡಲು ಕಾಯ್ದೆಗೆ ತಿದ್ದುಪಡಿ ಮತ್ತು ಜೀವ ವೈವಿಧ್ಯ ಹಾಗೂ ವನ್ಯಜೀವಿ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ದಿನ 24 ಗಂಟೆಗಳೂ ಗಣಿಗಾರಿಕೆ ನಡೆಸಲು ಅನುಮತಿ ನೀಡುವ ಪ್ರಸ್ತಾವಗಳಿಗೆ ಇದೇ 14ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದರೆ, ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಪೂರಕವಾಗಿ ಮಸೂದೆಗಳು ಮಂಡನೆ ಆಗಲಿವೆ. ಇವೆರಡರ ಪರಿಣಾಮ ಕರ್ನಾಟಕದ ಶ್ರೀಮಂತ ಅರಣ್ಯ, ಜೀವವೈವಿಧ್ಯ, ವನ್ಯಜೀವಿ ಮತ್ತು ಪರಿಸರ ವ್ಯವಸ್ಥೆ ದೊಡ್ಡ ಮಟ್ಟದ ಗಂಡಾಂತರಕ್ಕೆ ಸಿಲುಕಲಿದೆ. ಬಳ್ಳಾರಿ ಜಿಲ್ಲೆಯಲ್ಲಿ ದಶಕದ ಹಿಂದೆ ಆದ ಅನಾಹುತ ಇಡೀ ರಾಜ್ಯಕ್ಕೆ ವ್ಯಾಪಿಸಲಿದೆ ಎಂಬ ಆತಂಕ ಪರಿಸರ ಪ್ರೇಮಿಗಳಿಂದ ವ್ಯಕ್ತವಾಗಿದೆ.