ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವ ಈ ಹೊತ್ತಿನಲ್ಲಿ, ಬಿಜೆಪಿ ಮತ್ತು ಕಾಂಗ್ರೆಸ್ ಮೈತ್ರಿಕೂಟ ವಿಸ್ತರಣೆಗೆ ಮುಂದಾಗಿವೆ. ಭಾರತಕ್ಕೆ ಮೈತ್ರಿ ರಾಜಕಾರಣವು ಹೊಸ ವಿಚಾರ ಅಲ್ಲ. 60–70ರ ದಶಕದಲ್ಲೇ ದೇಶದಲ್ಲಿ ಮೈತ್ರಿಕೂಟ ರಚನೆಯಾಗಿತ್ತು. ಕೇಂದ್ರದಲ್ಲಿ ಪ್ರಬಲ ಪಕ್ಷದ ಬಹುಮತದ ಸರ್ಕಾರ ಇದ್ದಾಗ, ಅದರ ನೀತಿಗಳ ವಿರುದ್ಧ ವಿರೋಧ ಪಕ್ಷಗಳು ಒಟ್ಟಾಗಿದ್ದು ಭಾರತದಲ್ಲಿ ಹಲವು ಭಾರಿ ನಡೆದಿದೆ. ಈಗ ಮತ್ತೆ ಅಂಥದ್ದೇ ಪ್ರಯತ್ನ ನಡೆಯುತ್ತಿದೆ. ಈಚಿನ ವರ್ಷಗಳಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಏಕಪಕ್ಷದ ಪಾರಮ್ಯವೇ ಇರಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತಾದರೂ, ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಮೊರೆ ಹೋಗುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.