ಕೊಪ್ಪಳ ಜಿಲ್ಲೆಯ ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನದ ಬಳಿ ತುಂಗಭದ್ರಾ ನದಿಯಲ್ಲಿ ಬೀಸಾಡಿರುವ ವಸ್ತುಗಳಿಂದ ನದಿ ಚರಂಡಿಯಂತಾಗಿರುವುದು
–ಪ್ರಜಾವಾಣಿ ಚಿತ್ರ/ಭರತ್ ಕಂದಕೂರ
ಹುಲಿಗಿ ದೇವಸ್ಥಾನದ ಸುತ್ತ ಮೂಲಸೌಕರ್ಯಗಳು ಮರೀಚಿಕೆಯಾಗಿವೆ
–ಪ್ರಜಾವಾಣಿ ಚಿತ್ರ
ಗಂಗಾವತಿ ತಾಲ್ಲೂಕಿನ ಅಂಜನಾದ್ರಿಯ ಪಾರ್ಕಿಂಗ್ ಸ್ಥಳದ ಬಳಿ ಬಂಡಿ ವ್ಯಾಪಾರಸ್ಥರು ಎಸೆದ ಕಸ ರಾಶಿಗಟ್ಟಲೇ ಸಂಗ್ರಹವಾಗಿ ಬಿದ್ದಿರುವುದು
ಕಲಬುರಗಿ ಜಿಲ್ಲೆಯ ಗಾಣಗಾಪುರದ ದತ್ತ ಮಂದಿರದ ಮುಂಭಾಗದಲ್ಲಿ ಜಾನುವಾರುಗಳು ಠಿಕಾಣಿ ಹೂಡಿರುವುದು
ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡದ ಯಲ್ಲಮ್ಮ ದೇವಿ ದೇವಸ್ಥಾನ ಪ್ರವೇಶದ್ವಾರ ಮುಂದಿನ ಸೇತುವೆ ಬಳಿ ಬಿದ್ದಿರುವ ಕಸದ ರಾಶಿ
ಮಹದೇಶ್ವರ ಬೆಟ್ಟದಲ್ಲಿ ಅಮಾವಾಸ್ಯೆ ಜಾತ್ರೆಯ ಸಂದರ್ಭದಲ್ಲಿ ಮಹದೇಶ್ವರ ಸ್ವಾಮಿಯ ದರ್ಶನಕ್ಕಾಗಿ ಭಕ್ತರು ಸರತಿ ಸಾಲಿನಲ್ಲಿ ನಿಲ್ಲುವಾಗ ತಾತ್ಕಾಲಿಕ ನೆರಳಿನ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಭಕ್ತರ ಸಂಖ್ಯೆ ಇನ್ನೂ ಹೆಚ್ಚಿದ್ದರೆ ಬಿಸಿಲಿನಲ್ಲಿಯೇ ನಿಲ್ಲಬೇಕಾಗುತ್ತದೆ
ದಾವಣಗೆರೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತಲು ಉಂಟಾದ ನೂಕುನುಗ್ಗಲು ಮತ್ತು ಜನದಟ್ಟಣೆ ಕಂಡು ಬಂದಿದ್ದು ಹೀಗೆ
–ಪ್ರಜಾವಾಣಿ ಚಿತ್ರ/ಸತೀಶ್ ಬಡಿಗೇರ್
ಮಂಡ್ಯದ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ವಸತಿ– ಊಟ– ಶೌಚಾಲಯ ಸೇರಿದಂತೆ ಮೂಲಸೌಲಭ್ಯ ಒದಗಿಸಲು ಮಾಸ್ಟರ್ ಪ್ಲಾನ್ ರೂಪಿಸಲಾಗಿದ್ದು ಪ್ರಸ್ತಾವ ಸಲ್ಲಿಸಲಾಗಿದೆ.
–ಕುಮಾರಸ್ವಾಮಿ ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ
ದೇವಸ್ಥಾನಕ್ಕೆ ಹೊಂದಿಕೊಂಡ ಐದು ಎಕರೆ ಜಾಗವಿದ್ದು ಈ ಜಾಗ ನೀಡಲು ಅರ್ಚಕರ ಮನೆತನದವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ಅಭಿವೃದ್ಧಿ ಕೆಲಸ ವಿಳಂಬವಾಗಿದೆ. ವ್ಯಾಜ್ಯ ಪರಿಹಾರವಾದ ತಕ್ಷಣ ಅಭಿವೃದ್ಧಿ ಕೆಲಸ ಕೈಗೆತ್ತಿಕೊಳ್ಳಲಾಗುವುದು.
–ಅಯ್ಯಪ್ಪ ಸುತಗುಂಡಿ ಕಾರ್ಯನಿರ್ವಹಣಾಧಿಕಾರಿ ಹುಲಿಗಿ ದೇವಸ್ಥಾನ