ಮಂಗಳೂರಿನ ಬಂದರಿನಲ್ಲಿ ನಿರ್ವಹಣೆ ಇಲ್ಲದೆ ಸಮುದ್ರ ಸೇರುತ್ತಿರುವ ತ್ಯಾಜ್ಯ– ಪ್ರಜಾವಾಣಿ ಚಿತ್ರ / ಫಕ್ರುದ್ದೀನ್ ಎಚ್
ಮೂಲದಲ್ಲೇ ಪ್ಲಾಸ್ಟಿಕ್ ಉತ್ಪಾದನೆ ನಿಗ್ರಹಿಸುವಂತೆ ಸ್ಥಳೀಯ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಏಕ ಬಳಕೆ ಪ್ಲಾಸ್ಟಿಕ್ ಅನ್ನು ಸಂಪೂರ್ಣ ತೊಡೆದುಹಾಕಲು ಪರಿಸರ ಉಳಿಸಲು ಜಿಲ್ಲಾಡಳಿತ ಪೊಲೀಸ್ ಇಲಾಖೆ ಮತ್ತು ವಾಣಿಜ್ಯ ತೆರಿಗೆ ಇಲಾಖೆಯ ಸಹಯೋಗದಲ್ಲಿ ಜಂಟಿ ಪ್ರಯತ್ನ ಮುಂದುವರಿಸಲು ತೀರ್ಮಾನಿಸಲಾಗಿದೆ.
–ಈಶ್ವರ ಖಂಡ್ರೆ, ಅರಣ್ಯ ಜೀವವಿಜ್ಞಾನ ಮತ್ತು ಪರಿಸರ ಸಚಿವ
ಪ್ಯಾಕೇಜಿಂಗ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪ್ಲಾಸ್ಟಿಕ್ ಬಳಕೆಯಾಗುತ್ತಿದೆ. ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಪೊಟ್ಟಣಗಳಲ್ಲೇ ಆಹಾರ ಕೊಡುತ್ತಿದ್ದಾರೆ. ಅದನ್ನು ನಿರ್ಬಂಧಿಸಿದರೆ ಪ್ಲಾಸ್ಟಿಕ್ ಬಳಕೆ ತಾನಾಗಿಯೇ ಕಡಿಮೆಯಾಗುತ್ತದೆ.
–ವಿನಯ್ ಮಾಳಗೆ ಸಾಮಾಜಿಕ ಕಾರ್ಯಕರ್ತ ಬೀದರ್
ಪ್ಲಾಸ್ಟಿಕ್ ನಿಯಂತ್ರಣ ನಿಷೇಧ ಮಾಡುವುದು ನಗರಸಭೆ ಪುರಸಭೆ ಪಟ್ಟಣ ಪಂಚಾಯಿತಿ ಕೆಲಸ ಎನ್ನುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭಾವಿಸಿದಂತಿದೆ. ಪ್ಲಾಸ್ಟಿಕ್ ಬಳಕೆಯಿಂದಾಗುವ ಅಪಾಯದ ಬಗ್ಗೆ ಜಾಗೃತಿ ಮೂಡಿಸುತ್ತಿಲ್ಲ.
-ಚಿದಾನಂದ, ಅಧ್ಯಕ್ಷ ಯುವ ಸಂಚಲನ ದೊಡ್ಡಬಳ್ಳಾಪುರ
ಟ್ರೋಲ್ ಬೋಟಿಂಗ್ ನಿಷೇಧದ ಬೇಡಿಕೆ ಇನ್ನೂ ಈಡೇರಿಲ್ಲ. ಟ್ರೋಲಿಂಗ್‌ನಿಂದಾಗಿ ಸಮುದ್ರದಲ್ಲಿ ಪ್ಲಾಸ್ಟಿಕ್ ಬಲೆಗಳ ತುಂಡುಗಳು ಉಳಿಯುತ್ತವೆ. ಆದರೂ ಯಾವುದೇ ಕ್ರಮ ಆಗುತ್ತಿಲ್ಲ.
–ಡೊನಾಲ್ಡ್ ಪಿಂಟೊ ಪರ್ಸಿನ್, ಬೋಟ್ ಮಾಲೀಕ, ಮಂಗಳೂರು
ಸರ್ಕಾರದ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ (ನೀರಿನ ಬಾಟಲಿ ಪ್ಲಾಸ್ಟಿಕ್ ಕವರ್) ಬಳಸದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಆ ಮೂಲಕ ಮಾದರಿಯಾಗಬೇಕು. ನಿಷೇಧಿತ ಪ್ಲಾಸ್ಟಿಕ್ ಉತ್ಪಾದನೆ ತಡೆಯಬೇಕು
–ಶಂಕರ ಕುಂಬಿ, ಪರಿಸರಾಸಕ್ತ, ಧಾರವಾಡ
ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ಬಟ್ಟೆ ಚೀಲ ಕಾಗದದ ಚೀಲ ಅಡಿಕೆ ಹಾಳೆ ತಟ್ಟೆ ಲೋಟ ಮೊದಲಾದವನ್ನು ಬಳಸಲು ಆದ್ಯತೆ ನೀಡಬೇಕು. ಮೊದಲು ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಕಡ್ಡಾಯವಾಗಿ ನಿಷೇಧಿಸಬೇಕು