‘ಕೇಂದ್ರದಿಂದ ₹ 2,300 ಕೋಟಿ ಬಾಕಿ’
‘ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ ಹಲವು ಕೆರೆ ತುಂಬಿಸುವ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಕೇಂದ್ರದಿಂದ ಇದಕ್ಕಾಗಿ ₹ 2,300 ಕೋಟಿ ಬಾಕಿ ಬರಬೇಕಿದೆ’ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ತಿಳಿಸಿದರು. ‘ಕೇಂದ್ರದಿಂದಲೂ ಹಣ ಕೊಡಿಸುವಂತೆ ಸಚಿವರಾದ ಪ್ರಲ್ಹಾದ ಜೋಶಿ, ಭಗವಂತ ಖೂಬಾ ಅವರಿಗೆ ಮನವಿ ಸಲ್ಲಿಸಿದ್ದೇನೆ’ ಎಂದರು. ‘ಕೃಷ್ಣಾ, ಕಾವೇರಿ, ನೇತ್ರಾವತಿ ಸೇರಿದಂತೆ ವಿವಿಧ ನದಿಗಳಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಿಂದ ಕೆರೆಯ ಸುತ್ತಲಿನ ಅಂತರ್ಜಲ ಹೆಚ್ಚಾಗಲಿದೆ. ಅದರಲ್ಲೂ ಬರಗಾಲದ ಈ ಸಂದರ್ಭದಲ್ಲಿ ನೀರು ತುಂಬಿಸುವ ಯೋಜನೆ ಅತ್ಯಂತ ಅಗತ್ಯವಾಗಿದೆ. ಕಾಲಮಿತಿಯಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಲು ಹೆಚ್ಚುವರಿ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗಿದೆ’ ಎಂದು ಹೇಳಿದರು.