ಬೆಂಗಳೂರು: ರಾಜ್ಯದಲ್ಲಿ ಬಿರುಬಿಸಿಲು ನೆತ್ತಿ ಸುಡುತ್ತಿದ್ದು, ಬಿಸಿಲಿನ ಬೇಗೆಯಿಂದ ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

ಬಿಸಿಲಿನ ತಾಪದಿಂದ ರಕ್ಷಣೆ ಪಡೆಯಲು, ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾರ್ವಜನಿಕರು ಇಲ್ಲಿ ನೀಡಲಾಗಿರುವ ಸಲಹೆಗಳನ್ನ ಪಾಲಿಸಿ ಎಂದು ಎಕ್ಸ್ ಖಾತೆಯಲ್ಲಿ ಇಲಾಖೆ ಮಾಹಿತಿ ಹಂಚಿಕೊಂಡಿದೆ.

ಹೆಚ್ಚು ನೀರನ್ನು ಕುಡಿಯಿರಿ. ಮಜ್ಜಿಗೆ ಅಥವಾ ಎಳನೀರು, ಹಣ್ಣಿನ ರಸವನ್ನು ಹೆಚ್ಚಾಗಿ ಸೇವಿಸುವ ಮೂಲಕ ನಿರ್ಜಲೀಕರಣದ ಅಪಾಯದಿಂದ ರಕ್ಷಿಸಿಕೊಳ್ಳಿ.

ನೀರಿನ ಅಂಶ ಹೆಚ್ಚಾಗಿರುವ ತರಕಾರಿ, ಹಣ್ಣುಗಳನ್ನು ಸೇವಿಸುವುದು ಉತ್ತಮ.

ಸಡಿಲವಾದ ತೆಳು ಬಣ್ಣದ ಹತ್ತಿಯ ಬಟ್ಟೆಯನ್ನು ಧರಿಸಿರಿ, ಗಾಳಿಯಾಡುವ ಪಾದರಕ್ಷೆ ಧರಿಸಿ.

ಹೊರಗಡೆ ತೆರಳುವ ವೇಳೆ ಕಣ್ಣಿಗೆ ಕಪ್ಪು ಕನ್ನಡಕ, ತಲೆ ಮೇಲೆ ಟವೆಲ್, ಛತ್ರಿ ಅಥವಾ ಸ್ಕಾರ್ಫ್ ಬಳಸುವ ಮೂಲಕ ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಿ.

ರೇಡಿಯೊ, ದೂರದರ್ಶನ ಅಥವಾ ದಿನಪತ್ರಿಕೆಗಳ ಮೂಲಕ ಸ್ಥಳೀಯ ಹವಾಮಾನದ ಮಾಹಿತಿಯನ್ನು ಪಡೆದು, ಅದರಂತೆ ದೈನಂದಿನ ಚಟುವಟಿಕೆಗಳನ್ನು ಯೋಜಿಸಿಕೊಳ್ಳಿ...

ಈ ಎಲ್ಲಾ ಸೂಚನೆಗಳನ್ನು ಪಾಲಿಸಿ, ಸ್ವಾಸ್ಥ್ಯ ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದೆ.

ತಾಪಮಾನ ಏರಿಕೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚುತ್ತಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಇಂದು ಪ್ರಮುಖ ನಗರಗಳಾದ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉಳಿದಂತೆ ಗದಗದಲ್ಲಿ 38, ಬೆಳಗಾವಿಯಲ್ಲಿ 36, ಚಿತ್ರದುರ್ಗದಲ್ಲಿ 37, ಕಾರವಾರದಲ್ಲಿ 35, ಬೆಂಗಳೂರಿನಲ್ಲಿ 34, ಮಂಗಳೂರಿನಲ್ಲಿ 31 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.